Publish Date: Tue, 22 Aug 2017 (17:22 IST)
Updated Date: Tue, 22 Aug 2017 (17:26 IST)
ಸಿಎಂ ಸಿದ್ದರಾಮಯ್ಯನವರು ಅನಾರೋಗ್ಯಕ್ಕೀಡಾಗಿದ್ದಾರೆ. ತೀವ್ರ ಜ್ವರದಿಂದ ಬಳಲುತ್ತಿರುವ ಸಿಎಂ ತಮ್ಮೆಲ್ಲ ನಿಗದಿತ ಕಾರ್ಯಕ್ರಮಗಳನ್ನ ರದ್ದು ಮಾಡಿ ವಿಶ್ರಾಂತಿ ಪಡೆಯುತ್ತಿದ್ದಾರೆ.
ಬೆಳಗ್ಗೆ ಕೂಡ ಸಿಎಂ ಕೆಲ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು. ಆದರೆ, ಮಧ್ಯಾಹ್ನ ಜ್ವರ ಹೆಚ್ಚಾಗಿದ್ದರಿಂದ ಸಿಎಂ ಸಿದ್ದರಾಮಯ್ಯನವರಿಗೆ ವೈದ್ಯರು ವಿಶ್ರಾಂತಿಗೆ ಸೂಚಿಸಿದ್ದಾರೆ. ಹೀಗಾಗಿ, ಎಲ್ಲ ಕಾರ್ಯಕ್ರಮಗಳನ್ನ ರದ್ದು ಮಾಡಿರುವ ಸಿಎಂ ಸಿದ್ದರಾಮಯ್ಯ ಮನೆಗೆ ತೆರಳಿ ವಿಶ್ರಾಂತಿ ಪಡೆಯುತ್ತಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಬಿಡುವಿಲ್ಲದೆ ಕಾರ್ಯಕ್ರಮಗಳಲ್ಲಿ ಸಿಎಂ ಸಿದ್ದರಾಮಯ್ಯ ಭಾಗವಹಿಸುತ್ತಿದ್ದಾರೆ. ಇದರ ಜೊತೆಗೆ ದೆಹಲಿ ಭೇಟಿ ಸಹ ಮಾಡಿದ್ದು, ಹವಾಮಾನ ವೈರೀತ್ಯದಿಂದ ಆರೋಗ್ಯದ ಮೇಲೆ ಪರಿಣಾಮ ಬೀರಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ