Publish Date: Sun, 07 May 2017 (16:22 IST)
Updated Date: Sun, 07 May 2017 (16:25 IST)
ಬಿಜೆಪಿಯ ರಾಜ್ಯ ಉಸ್ತುವಾರಿ ಮುರಳಿಧರ್ ರಾವ್ ವಿರುದ್ಧ ಗರಂ ಆದ ಸಿಎಂ, ಜೈಲಿಗೆ ಹೋಗಿ ಬಂದವರು, ಜೈಲಿಗೆ ಹೋಗುವವರು, ಭ್ರಷ್ಟರು ಅವರ ಪಕ್ಷದಲ್ಲಿಯೇ ಇದ್ದಾರೆ. ಇಂತಹವರಿಂದ ನಾವು ಪಾಠ ಕಲಿಯಬೇಕಾಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.
ಬರಗಾಲ ಪರಿಸ್ಥಿತಿ ನಿರ್ವಹಣೆಯಲ್ಲಿ ಸರಕಾರ ವಿಫಲವಾಗಿದೆ ಎನ್ನುವ ಬಿಜೆಪಿ ಆರೋಪಕ್ಕೆ ತಿರುಗೇಟು ನೀಡಿದ್ದಾರೆ.
ಬರಗಾಲ ಪರಿಸ್ಥಿತಿ ನಿರ್ವಹಣೆಗಾಗಿ ಕೇಂದ್ರ ಸರಕಾರಕ್ಕೆ 4780 ಕೋಟಿ ರೂಪಾಯಿಗಳ ಆರ್ಥಿಕ ನೆರವು ನೀಡುವಂತೆ ಸರಕಾರ ಮನವಿ ಮಾಡಿತ್ತು. ಆದರೆ, ಕೇಂದ್ರ ಸರಕಾರ 1780 ಕೋಟಿ ರೂಪಾಯಿಗಳ ನೆರವು ನೀಡಿತ್ತು. ಅದರಲ್ಲಿ 1100 ಕೋಟಿ ರೂಪಾಯಿಗಳನ್ನು ಬರಗಾಲ ನಿರ್ವಹಣೆಗಾಗಿ ಬಳಸಿಕೊಳ್ಳಲಾಗಿದೆ ಎಂದರು.
ಮುಂಬರುವ ಚುನಾವಣೆಯಲ್ಲಿ ಸೋಲು ಖಚಿತವಾಗಿದ್ದರಿಂದ ಹತಾಷರಾಗಿ ಬಿಜೆಪಿ ಮುಖಂಡರು ಕೇವಲ ಜನತೆಯನ್ನು ತಪ್ಪುದಾರಿಗೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.