Publish Date: Wed, 09 Aug 2017 (16:20 IST)
Updated Date: Wed, 09 Aug 2017 (16:25 IST)
ಬಿಜೆಪಿ ನಾಯಕರ ಡೋಂಗಿತನವನ್ನು ಕಳಚಿಡಿ ಎಂದು ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.
ಕ್ವಿಟ್ ಇಂಡಿಯಾ ಚಳುವಳಿಯ ಅಂಗವಾಗಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮ್ಮ ನಡೆ ದಲಿತರ ಕಡೆ ಎಂದು ಘೋಷಣೆ ಕೂಗಿದ ಬಿಜೆಪಿ ನಾಯಕರು, ದಲಿತರ ಮನೆಗೆ ತೆರಳಿ ಹೋಟೆಲ್‌ನಿಂದ ಊಟ ತರಿಸಿಕೊಂಡು ತಿಂದು ತೇಗಿದರು. ಇದು ಅವರ ದಲಿತ ಪ್ರೇಮವಾಗಿದೆ ಎಂದು ಲೇವಡಿ ಮಾಡಿದರು.
ದಲಿತರ, ಹಿಂದುಳಿದವರ, ಶೋಷಿತರ, ಬಡವರ ಬಗ್ಗೆ ಬಿಜೆಪಿಗೆ ಯಾವುದೇ ಕಾಳಜಿಯಿಲ್ಲ. ಜನರಿಗೆ ಕನಸು ತೋರಿಸಿ ಅಧಿಕಾರಕ್ಕೆ ಬರಬೇಕು ಎನ್ನುವುದೇ ಅವರ ಗುರಿಯಾಗಿದೆ ಎಂದು ವಾಗ್ದಾಳಿ ನಡೆಸಿದರು.
ದೇಶವನ್ನು ಹಿಂದು ರಾಷ್ಟ್ರ ಮಾಡುವುದೇ ಬಿಜೆಪಿಯವರ ಅಜೆಂಡಾ. ದೇಶದಲ್ಲಿರುವ ಅಲ್ಪಸಂಖ್ಯಾತರು ಮತ್ತು ಇತರ ಸಮುದಾಯವರನ್ನು ತುಳಿಯುವುದೇ ಅವರ ಕಾಯಕವಾಗಿದೆ ಎಂದರು.
ಗೋರಕ್ಷಣೆ ಹೆಸರಲ್ಲಿ ದಲಿತರ ಕಗ್ಗೊಲೆಯಾಗುತ್ತಿವೆ. ಆದರೆ, ಆರೋಪಿಗಳ ವಿರುದ್ಧ ಬಿಜೆಪಿ ಸರಕಾರಗಳು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.