ಬಿಜೆಪಿ ನಾಯಕರ ಡೋಂಗಿತನ ಕಳಚಿಬಿಡಿ: ಸಿಎಂ ವಾಗ್ದಾಳಿ

Webdunia
ಬುಧವಾರ, 9 ಆಗಸ್ಟ್ 2017 (16:20 IST)
ಬಿಜೆಪಿ ನಾಯಕರ ಡೋಂಗಿತನವನ್ನು ಕಳಚಿಡಿ ಎಂದು ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.
ಕ್ವಿಟ್ ಇಂಡಿಯಾ ಚಳುವಳಿಯ ಅಂಗವಾಗಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮ್ಮ ನಡೆ ದಲಿತರ ಕಡೆ ಎಂದು ಘೋಷಣೆ ಕೂಗಿದ ಬಿಜೆಪಿ ನಾಯಕರು, ದಲಿತರ ಮನೆಗೆ ತೆರಳಿ ಹೋಟೆಲ್‌ನಿಂದ ಊಟ ತರಿಸಿಕೊಂಡು ತಿಂದು ತೇಗಿದರು. ಇದು ಅವರ ದಲಿತ ಪ್ರೇಮವಾಗಿದೆ ಎಂದು ಲೇವಡಿ ಮಾಡಿದರು. 
 
ದಲಿತರ, ಹಿಂದುಳಿದವರ, ಶೋಷಿತರ, ಬಡವರ ಬಗ್ಗೆ ಬಿಜೆಪಿಗೆ ಯಾವುದೇ ಕಾಳಜಿಯಿಲ್ಲ. ಜನರಿಗೆ ಕನಸು ತೋರಿಸಿ ಅಧಿಕಾರಕ್ಕೆ ಬರಬೇಕು ಎನ್ನುವುದೇ ಅವರ ಗುರಿಯಾಗಿದೆ ಎಂದು ವಾಗ್ದಾಳಿ ನಡೆಸಿದರು.  
 
ದೇಶವನ್ನು ಹಿಂದು ರಾಷ್ಟ್ರ ಮಾಡುವುದೇ ಬಿಜೆಪಿಯವರ ಅಜೆಂಡಾ. ದೇಶದಲ್ಲಿರುವ ಅಲ್ಪಸಂಖ್ಯಾತರು ಮತ್ತು ಇತರ ಸಮುದಾಯವರನ್ನು ತುಳಿಯುವುದೇ ಅವರ ಕಾಯಕವಾಗಿದೆ ಎಂದರು. 
 
ಗೋರಕ್ಷಣೆ ಹೆಸರಲ್ಲಿ ದಲಿತರ ಕಗ್ಗೊಲೆಯಾಗುತ್ತಿವೆ. ಆದರೆ, ಆರೋಪಿಗಳ ವಿರುದ್ಧ ಬಿಜೆಪಿ ಸರಕಾರಗಳು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಕನ ಕನಸಿನಿಂದ ಮೊದಲು ಹೊರಬನ್ನಿ: ಪ್ರಿಯಾಂಕ್‌ ಖರ್ಗೆಗೆ ಸಿ.ಟಿ.ರವಿ ಟಾಂಗ್‌

ಯುವತಿ ಮೇಲೆ ಗ್ಯಾಂಗ್‌ರೇಪ್‌ ಬೆನ್ನಲ್ಲೇ ಮಹಿಳೆಯರ ಬಗ್ಗೆ ಸಿಎಂ ಮಮತಾ ಬ್ಯಾನರ್ಜಿ ವಿವಾದಾತ್ಮಕ ಹೇಳಿಕೆ

ಪಾಕಿಸ್ತಾನ ಮೇಲೆ ಮುಗಿಬಿದ್ದ ಅಫ್ಗನ್: ಗುಂಡಿನ ಕಾಳಗದಲ್ಲಿ 58 ಸೈನಿಕರ ಹತ್ಯೆ

ಸಾರ್ವಜನಿಕ ಸ್ಥಳಗಳಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆಗಳಿಗೆ ನಿಷೇಧ ಹೇರಲು ಸಚಿವ ಪ್ರಿಯಾಂಕ್‌ ಖರ್ಗೆ ಒತ್ತಾಯ

ಆರ್‌ಎಸ್‌ಎಸ್‌ ಸಮವಸ್ತ್ರದಲ್ಲೇ ಧರಣಿ ಕುಳಿತ ಶಾಸಕ ಮುನಿರತ್ನ: ತಿರುಗೇಟು ನೀಡಿದ ಡಿಕೆಶಿ

ಮುಂದಿನ ಸುದ್ದಿ
Show comments