Publish Date: Thu, 14 Sep 2017 (18:53 IST)
Updated Date: Thu, 14 Sep 2017 (18:54 IST)
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನಿಗೆ ಏನಾದ್ರೂ ಮಾನಮರ್ಯಾದೆ ಇದೆಯಾ? ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಬೆಳಗಾವಿ ಜಿಲ್ಲೆಯ ಸುಳೇಬಾವಿ ಗ್ರಾಮದಲ್ಲಿ ಆಯೋಜಿಸಲಾದ ಪಕ್ಷದ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಈಗಾಗಲೇ ಭ್ರಷ್ಟಾಚಾರದ ಆರೋಪಗಳ ಮೇಲೆ ಜೈಲಿಗೆ ಹೋಗಿ ಬಂದಿದ್ದಾರೆ. ಇಂಥಹವರು ಕಾಂಗ್ರೆಸ್ ಪಕ್ಷದ ವಿರುದ್ಧ ಚಾರ್ಜ್‌ಶೀಟ್ ಹಾಕ್ತಾರಂತೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸರಕಾರ ಅಧಿಕಾರಕ್ಕೆ ಬಂದು 4 ವರ್ಷ4 ತಿಂಗಳಾಗಿವೆ. ಕಾಂಗ್ರೆಸ್ ಸರಕಾರ ಯಾವುದೇ ಭ್ರಷ್ಟಾಚಾರ ಹಗರಣಗಳಲ್ಲಿ ಭಾಗಿಯಾಗಿಲ್ಲ. ಇದನ್ನು ನಾನು ಪ್ರಾಮಾಣಿಕವಾಗಿ ಹೇಳುತ್ತಿದ್ದೇನೆ ಎಂದು ತಿಳಿಸಿದ್ದಾರೆ.
ಬಿಎಸ್‌ವೈ ಅಧಿಕಾರದಲ್ಲಿದ್ದಾಗ ಭ್ರಷ್ಟಾಚಾರ ರಾಜ್ಯದಲ್ಲಿ ತಾಂಡವವಾಡುತ್ತಿತ್ತು. ಕಾಂಗ್ರೆಸ್ ಸರಕಾರ ಇಂತಹ ಯಾವುದೇ ಭ್ರಷ್ಟಾಚಾರಗಳಿಗೆ ಅವಕಾಶ ನೀಡಿಲ್ಲ. ವಿಪಕ್ಷಗಳ ಆರೋಪಗಳಲ್ಲಿ ಸತ್ಯಾಂಶವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.