Select Your Language

Notifications

webdunia
webdunia
webdunia
webdunia

ಜಾರಕಿಹೊಳಿ ಸಹೋದರರ ವಿರುದ್ಧ ಸಿಎಂ ಸಿದ್ದರಾಮಯ್ಯ ಗರಂ

ಜಾರಕಿಹೊಳಿ ಸಹೋದರರ ವಿರುದ್ಧ ಸಿಎಂ ಸಿದ್ದರಾಮಯ್ಯ ಗರಂ
ಬೆಳಗಾವಿ , ಸೋಮವಾರ, 22 ಮೇ 2017 (15:45 IST)
ನಿಮ್ಮ ಕಚ್ಚಾಟದಿಂದ ಬೆಳಗಾವಿ ಮೇಯರ್ ಗಾದಿ ತಪ್ಪಿದೆ ಎಂದು ಜಾರಕಿಹೊಳಿ ಸಹೋದರರ ವಿರುದ್ಧ ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದಾರೆ.
 
ನಿಮ್ಮ ಭಿನ್ನಮತದಿಂದಾಗಿ ಬೆಳಗಾವಿ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಮುಖಂಡರು ಅನ್ಯಪಕ್ಷದತ್ತ ಮುಖ ಮಾಡುತ್ತಿದ್ದಾರೆ. ಒಂದು ವೇಳೆ, ಹೀಗಾದಲ್ಲಿ ನಿಮಗೂ ನಷ್ಟ, ಪಕ್ಷಕ್ಕೂ ನಷ್ಟವಾಗಲಿದೆ ಎಂದು ಖಾರವಾಗಿ ನುಡಿದಿದ್ದಾರೆ.
 
ಕಾಂಗ್ರೆಸ್ ಪಕ್ಷದ ರಾಜ್ಯ ಉಸ್ತುವಾರಿ ಕೆ.ಸಿ ವೇಣುಗೋಪಾಲ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಸಿಎಂ, ಮುಂದಿನ ವರ್ಷದಲ್ಲಿ ವಿಧಾನಸಭೆಗೆ ಚುನಾವಣೆ ನಡೆಯಲಿದೆ. ಪ್ರತಿಯೊಬ್ಬರು ಒಗ್ಗಟ್ಟಿನಿಂದ ಪಕ್ಷದ ಗೆಲುವಿಗೆ ಶ್ರಮಿಸಬೇಕು ಎಂದು ಕರೆ ನೀಡಿದರು.
 
ಬೆಳಗಾವಿ ಜಿಲ್ಲೆಯ ನಾಯಕರಲ್ಲಿ ಯಾವುದೇ ವಿಷಯದ ಬಗ್ಗೆ ಅಸಮಾಧಾನವಿದ್ದಲ್ಲಿ ಪಕ್ಷದ ವೇದಿಕೆಯಲ್ಲಿ ಚರ್ಚಿಸಿ ಪರಿಹಾರ ಕಂಡುಕೊಳ್ಳಬಹುದು. ಯಾವುದೇ ಕಾರಣಕ್ಕೂ ಬಹಿರಂಗ ಹೇಳಿಕೆ ನೀಡಬೇಡಿ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ತಾಕೀತು ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಕಾಂಗ್ರೆಸ್‌ನ ಒಂದು ವಿಕೆಟ್ ಬಲಿಪಡೆದ ದೇವೇಗೌಡ