Publish Date: Wed, 13 Sep 2017 (12:36 IST)
Updated Date: Wed, 13 Sep 2017 (12:40 IST)
ಬಿಜೆಪಿ ಮುಖಂಡರೊಂದಿಗೆ ಬಹಿರಂಗ ಚರ್ಚೆಗೆ ಕಾಂಗ್ರೆಸ್ ಪಕ್ಷ ಸದಾ ಸಿದ್ದವಿದೆ. ತಾಕತ್ತಿದ್ರೆ ಬಹಿರಂಗ ಚರ್ಚೆಗೆ ಬನ್ನಿ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ ರಾಜ್ಯ ಉಸ್ತುವಾರಿ ಕೆ.ಮುರಳೀಧರ್ ರಾವ್‌ಗೆ ತಿರುಗೇಟು ನೀಡಿದ್ದಾರೆ.
ಕಾಂಗ್ರೆಸ್ ಹಗರಣದ ದಾಖಲೆಗಳನ್ನು ಬಿಡುಗಡೆ ಮಾಡುತ್ತೇವೆ ಎಂದು ಹೇಳ್ತಾರೆ. ಮೊದಲು ಸಂಬಂಧಿತ ದಾಖಲೆಗಳನ್ನು ಬಿಡುಗಡೆ ಮಾಡಿ. ಬಹಿರಂಗ ಚರ್ಚೆಗೆ ಕಾಂಗ್ರೆಸ್ ಪಕ್ಷವೂ ಸಿದ್ದವಿದೆ ಎಂದು ಮರುಸವಾಲ್ ಹಾಕಿದ್ದಾರೆ.
ಮೊದಲು ಬಿಜೆಪಿ ನಾಯಕರು ತಮ್ಮ ಹಗರಣಗಳಿಂದ ತಪ್ಪಿಸಿಕೊಳ್ಳಲಿ. ಬಿಜೆಪಿ ನಾಯಕರು ಹಗರಣಗಳಲ್ಲಿಯೇ ಮುಳುಗಿಹೋಗಿದ್ದಾರೆ. ಕಾಂಗ್ರೆಸ್ ಪಕ್ಷದ ಹಗರಣ ನಡೆಸಿದೆ ಎನ್ನುವುದರ ಬಗ್ಗೆ ಮಾತನಾಡುತ್ತಾರೆ ಎಂದು ಲೇವಡಿ ಮಾಡಿದ್ದಾರೆ
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಅನೇಕ ಬಿಜೆಪಿ ನಾಯಕರ ವಿರುದ್ಧ ದೂರುಗಳು ದಾಖಲಾಗಿವೆ. ಬಿಜೆಪಿ ಹಗರಣ ಮುಕ್ತವಾಗಿ ಹೊರಬರಲಿ. ನಂತರ ಕಾಂಗ್ರೆಸ್ ಪಕ್ಷದ ವಿರುದ್ಧ ಬಹಿರಂಗ ಚರ್ಚೆಗೆ ಬರಲಿ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.