Webdunia - Bharat's app for daily news and videos

Install App

ಬಿಎಸ್‌ವೈ ಗುಡುಗಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು

Webdunia
ಭಾನುವಾರ, 4 ಜೂನ್ 2017 (11:11 IST)
ರಾಜ್ಯ ಸರಕಾರ ಸಾಲ ಮನ್ನಾ ಮಾಡಿದರೆ ಕೇವಲ ಶೇ.28 ರಷ್ಟು ರೈತರಿಗೆ ಲಾಭವಾಗುತ್ತದೆ. ಕೇಂದ್ರ ಸರಕಾರ ಸಾಲ ಮನ್ನಾ ಮಾಡಿದರೆ ಶೇ,70 ರಷ್ಟು ರೈತರಿಗೆ ಅನುಕೂಲವಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿರುದ್ಧ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
 
ಯಡಿಯೂರಪ್ಪ ಕೇಂದ್ರ ಸರಕಾರದ ಮನವೊಲಿಸಿ ರೈತರ ಸಾಲ ಮನ್ನಾ ಮಾಡುತ್ತಾರೆಯೇ ಎನ್ನುವುದನ್ನು ಕಾದು ನೋಡುತ್ತಿದ್ದೇನೆ. ನಂತರ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದು ತಿಳಿಸಿದ್ದಾರೆ.
 
 ಬಡವರ ಕೆಲಸ ಮಾಡಲು 56 ಇಂಚಿನ ಎದೆ ಬೇಕಾಗಿಲ್ಲ. ಹೃದಯಬೇಕು. ಪ್ರಧಾನಿ ಮೋದಿಯವರು ತಮ್ಮ ಹೃದಯ ವೈಶಾಲ್ಯತೆಯಿಂದ ರೈತರ ಸಾಲ ಮನ್ನಾ ಮಾಡಬೇಕು ಎಂದರು.
 
ಉತ್ತರಪ್ರದೇಶದಲ್ಲಿ ರೈತರ ಸಾಲ ಮನ್ನಾ ಮಾಡುವ ಕೇಂದ್ರ ಸರಕಾರ, ರಾಜ್ಯದಲ್ಲಿ ಭೀಕರ ಬರಗಾಲ ಎದುರಾಗಿದ್ದರೂ ರೈತರ ಸಾಲ ಮನ್ನಾ ಮಾಡಲು ಹಿಂದೇಟು ಹಾಕುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
 
ಕೇಂದ್ರ ಸರಕಾರದ ನಿರ್ಧಾರಕ್ಕಾಗಿ ಕಾಯುತ್ತಿದ್ದೇನೆ. ಒಂದು ವೇಳೆ ಕೇಂದ್ರ ಸರಕಾರ ಯಾವುದೇ ನಿರ್ಧಾರ ತೆಗೆದುಕೊಳ್ಳದಿದ್ದರೆ  ಶೀಘ್ರದಲ್ಲಿ ರಾಜ್ಯ ಸರಕಾರ ಸ್ಪಷ್ಟ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.   
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಾನು ಸತ್ತು ಮನೆಯ ಮಾಲಿಕರನ್ನು ರಕ್ಷಿಸಿದ ಸಾಹಸಿ ನಾಯಿ: ಕೊನೆಯ ಕ್ಷಣದ Video

ಬರಪೀಡಿತ ರೈತರಿಗೆ ಸರ್ಕಾರ ತಕ್ಷಣ 10 ಸಾವಿರ ಕೋಟಿ ರೂ ನೀಡಬೇಕು: ವಿಜಯೇಂದ್ರ

ಯಾರಿಗೂ ಅಸಮಾಧಾನವಿಲ್ಲ, ಯಾರೂ ರಾಜೀನಾಮೆ ನೀಡಲ್ಲ ಎಂದ ಬಿಕೆ ಹರಿಪ್ರಸಾದ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ತನ್ನ ಪಾಡಿಗೆ ನಡೆದು ಹೋಗುತ್ತಿದ್ದ ಬಾಲಕಿ ಅದೊಂದು ಕಾರಣಕ್ಕೆ ಪ್ರಾಣವೇ ಕಳೆದುಕೊಂಡಳು: ಶಾಕಿಂಗ್ Video

ಮುಂದಿನ ಸುದ್ದಿ
Show comments