ಹಣ ಇಲ್ಲಾಂದ್ರೆ ಇದೆಂಗಾಯ್ತು ಹೇಳ್ರಪಾ: BJP ಗೆ ಸಿಎಂ ಸಿದ್ದರಾಮಯ್ಯ ವ್ಯಂಗ್ಯ

Krishnaveni K
ಶನಿವಾರ, 5 ಅಕ್ಟೋಬರ್ 2024 (10:14 IST)
ಸಿಂಧನೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳಿಗಾಗಿ ಅಭಿವೃದ್ಧಿ ಕಾರ್ಯಗಳನ್ನು ತಡೆಹಿಡಿದಿದೆ ಎಂಬ ಬಿಜೆಪಿ ಆರೋಪಗಳಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದರು.

ಗ್ಯಾರಂಟಿಗಳಿಂದಾಗಿ  ಬೇರೆ ಅಭಿವೃದ್ಧಿಗೆ ಹಣ ಇಲ್ಲ, ಹಣ ಇಲ್ಲ ಅಂತ BJP ಅಪಪ್ರಚಾರ ಮಾಡ್ತಿದಾರಲ್ಲಾ ಹಾಗಿದ್ರೆ ಈಗ ಉದ್ಘಾಟಿಸಿದ 1695 ಕೋಟಿ ಹಣ ಎಲ್ಲಿಂದ ಬಂತು? ಒಂದೇ ವಿಶೇಷ ಕ್ಯಾಬಿನೆಟ್ ನಲ್ಲಿ 11770 ಕೋಟಿ ಕಾಮಗಾರಿಗೆ ಅನುಮೋದನೆ ಕೊಟ್ವಲ್ಲಾ, ಇದೆಲ್ಲಾ ಹೇಗಾಯ್ತು ಹೇಳ್ರಪಾ ಎಂದು ವ್ಯಂಗ್ಯವಾಗಿ BJP ಯನ್ನು ಪ್ರಶ್ನಿಸಿದರು.

ಇದೇ ಸಂದರ್ಭದಲ್ಲಿ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗಾಗಿ 371 ಜೆ ಜಾರಿಗೆ ಆಗ್ರಹಿಸಿ ಹೋರಾಟ ಸಂಘಟಿಸಿದ ಎಲ್ಲಾ ಜಾತಿ, ಧರ್ಮಗಳ ಹಿರಿಯ ಹೋರಾಟಗಾರರನ್ನು ಇದೇ ದಸರಾ ವೇದಿಕೆಯಲ್ಲಿ ಸನ್ಮಾನಿಸಿದ ಬಳಿಕ 371 ಜೆ ಸೃಷ್ಟಿಸಿದ ಅವಕಾಶದಲ್ಲಿ ಪ್ರಮುಖ ಹುದ್ದೆಗಳನ್ನು ಪಡೆದುಕೊಂಡ ಸಿಂಧನೂರಿನ 10 ಮಂದಿಯನ್ನು ಸನ್ಮಾನಿಸಲಾಯಿತು.

ಸಿಂಧನೂರು ಶಾಸಕರಾದ ಹಂಪನಗೌಡ ಬಾದರ್ಲಿ ಅವರು ಅಧ್ಯಕ್ಷತೆ ವಹಿಸಿದ್ದ ವೇದಿಕೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಶರಣಪ್ರಕಾಶ್ ಪಾಟೀಲ್, ಕಾನೂನು ಸಚಿವರಾದ ಹೆಚ್.ಕೆ.ಪಾಟೀಲ್, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಬೋಸರಾಜು ಸೇರಿ ಕೊಪ್ಪಳ‌ ಮತ್ತು ರಾಯಚೂರು ಜಿಲ್ಲೆಯ ಶಾಸಕರು, ಸಂಸದರು, ವಿಧಾನ ಪರಿಷತ್ ಸದಸ್ಯರು, ಮುಖಂಡರುಗಳು ಉಪಸ್ಥಿತರಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನ್ನದಾತರ ಜೊತೆ ಜನ್ಮದಿನ ಯಾವತ್ತೂ ಮರೆಯಲಾರೆ: ವಿಜಯೇಂದ್ರ

ತಮ್ಮ ಪಕ್ಷದಲ್ಲೇ ಬೇರೆಯವರಿಗೆ ಅವಕಾಶ ಕೊಡದ ಗಾಂಧಿ ಕುಟುಂಬದವರು ಸೇನೆ ಬಗ್ಗೆ ಮಾತನಾಡ್ತಾರೆ: ಬಿಜೆಪಿ ವ್ಯಂಗ್ಯ

ಕರ್ನಾಟಕ ಎಸ್ಎಸ್ಎಲ್ ಸಿ, ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಇಲ್ಲಿದೆ ನೋಡಿ

ದೇವರು ಕೊಟ್ರೂ ಪೂಜಾರಿ ಕೊಡಲಿಲ್ಲ: ಕೇಂದ್ರ ಜಿಎಸ್ ಟಿ ಇಳಿಸಿದ್ದರೆ ನಂದಿನಿ ತುಪ್ಪದ ಬೆಲೆ ಏರಿಸಿದ ಕೆಎಂಎಫ್

ಬ್ರೆಜಿಲ್ ಮಾಡೆಲ್ ಹರ್ಯಾಣದಲ್ಲಿ 22 ಬಾರಿ ವೋಟ್: ರಾಹುಲ್ ಗಾಂಧಿಯಿಂದ ಮತ್ತೊಂದು ಬಾಂಬ್

ಮುಂದಿನ ಸುದ್ದಿ
Show comments