Publish Date: Wed, 27 May 2026 (15:25 IST)
Updated Date: Wed, 27 May 2026 (15:27 IST)
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಕಾಲಾವಧಿ ನಾಳೆಗೆ ಮುಕ್ತಾಯವಾಗಲಿದೆ. ನಾಳೆ ಸಿದ್ದರಾಮಯ್ಯ ರಾಜೀನಾಮೆಗೆ ಸಮಯ ನಿಗದಿಯಾಗಿದೆ.
ದೆಹಲಿಯಲ್ಲಿ ಹೈಕಮಾಂಡ್ ನಾಯಕರ ಜೊತೆ ಮಾತುಕತೆ ಬಳಿಕ ಸಿದ್ದರಾಮಯ್ಯ ರಾಜೀನಾಮೆಗೆ ನಿರ್ಧಾರ ಮಾಡಿದ್ದಾರೆ. ಅಧಿಕಾರ ಹಂಚಿಕೆ ಸೂತ್ರದಂತೆ ಡಿಕೆ ಶಿವಕುಮಾರ್ ಗೆ ಸಿಎಂ ಸ್ಥಾನ ಬಿಟ್ಟುಕೊಡುವಂತೆ ರಾಹುಲ್ ಗಾಂಧಿ ಸೂಚನೆ ಬೆನ್ನಲ್ಲೇ ರಾಜೀನಾಮೆಗೆ ನಿರ್ಧಾರ ಮಾಡಿದ್ದಾರೆ.
ಅದರಂತೆ ನಾಳೆ ಬೆಳಿಗ್ಗೆ 11.30 ಕ್ಕೆ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಇದಕ್ಕಾಗಿ ಅವರು ರಾಜ್ಯಪಾಲರ ಜೊತೆ ಸಮಯ ಕೇಳಿದ್ದಾರೆ ಎಂದು ವರದಿಯಾಗಿದೆ. ಇದರೊಂದಿಗೆ ಸಿದ್ದರಾಮಯ್ಯ ರಾಜೀನಾಮೆ ನೀಡುವುದು ಅಧಿಕೃತವಾಗಿದೆ.
About Writer
ಕೃಷ್ಣವೇಣಿ ಕೆ
Completed bachelor degree in Journalism and communication in SDMC Ujire. 15 years of experience as journalist. Worked as sub editor and reporter. Specialties in sports, politics and entertainment.....
ಮತ್ತಷ್ಟು ಓದಿ