Webdunia - Bharat's app for daily news and videos

Install App

ಯದುವೀರ ವಿಚಾರದಲ್ಲಿ ಎಚ್ಚರ ವಹಿಸಿ: ಕೈ ನಾಯಕರಿಗೆ ಸಿದ್ದರಾಮಯ್ಯ ಕಿವಿಮಾತು

Sampriya
ಶನಿವಾರ, 16 ಮಾರ್ಚ್ 2024 (14:17 IST)
Photo Courtesy Facebook
ಮೈಸೂರು: ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಲೋಕಸಭಾ ಚುನಾವಣೆ ರಂಗೇರುತ್ತಿದ್ದು, ಜೆಡಿಎಸ್– ಬಿಜೆಪಿ ಮೈತ್ರಿಯಾಗಿ ಕಾಂಗ್ರೆಸ್‌ನ್ನು ಮಣಿಸಲು ಭರ್ಜರಿ ತಯಾರಿ ನಡೆಸುತ್ತಿದೆ. ಇನ್ನೂ ಮೈಸೂರು-ಕೊಡಗು ಕ್ಷೇತ್ರದಲ್ಲಿ ಸಂಸದ ಪ್ರತಾಪ್ ಸಿಂಹಗೆ ಈ ಬಾರಿ ಟಿಕೆಟ್ ಕೈ ತಪ್ಪಿದ್ದು, ರಾಜವಂಶಸ್ಥ ಯದುವೀರ ಕೃಷ್ಣದತ್ತ ಒಡೆಯರ್ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ. 
 
ಇತ್ತ ಕಾಂಗ್ರೆಸ್‌ನಿಂದ ರಾಜವಂಶಸ್ಥನ ವಿರುದ್ಧ ಸ್ಪರ್ಧಿಸುವುದು ಯಾರೆಂದು ಇನ್ನೂ ಫೈನಲ್ ಆಗಿಲ್ಲ. ಈ ಮಧ್ಯೆ ಸಿಎಂ ಸಿದ್ದರಾಮಯ್ಯ ಅವರು ಯಾವುದೇ ಕಾರಣಕ್ಕೂ ಯದುವೀರ ವಿರುದ್ಧ ಟೀಕೆಗಳನ್ನು ನೀಡಬಾರೆಂದು ಕೈ ನಾಯಕರಿಗೆ ತಿಳಿ ಹೇಳಿದ್ದಾರೆ. 
 
ಯದುವೀರ ವಿರುದ್ಧ ತುಟಿ ಬಿಚ್ಚದಂತೆ ಕೈ ನಾಯಕರಿಗೆ ಸಿಎಂ ಕಿವಿಮಾತು: ಪ್ರಚಾರದ ವೇಳೆ ಅಥವಾ ಮಾಧ್ಯಮಗಳ ಮುಂದೆ ಮಾತನಾಡುವದಾಗ ಯದುವೀರ ಅವರನ್ನು ಯಾವುದೇ ಕಾರಣಕ್ಕೂ ಟೀಕಿಸಲು ಮುಂದಾಗಬೇಡಿ. ಯದುವಂಶದ ವಿಚಾರ ಮೈಸೂರು ಭಾಗದಲ್ಲಿ ಭಾವನಾತ್ಮಕವಾಗಿದೆ. ನಾವು ನೀಡಿದ ಹೇಳಿಕೆಯೇ ನಮಗೆ ಮುಳ್ಳಾಗುವ ಸಾಧ್ಯತೆಯಿದೆ ಎಂದು ಕಿವಿ ಮಾತು ಹೇಳಿದ್ದಾರೆ. 
 
ಬಿಜೆಪಿ ಹೇಳಿರುವ ಸುಳ್ಳುಗಳ ಮೇಲೆ ಪ್ರಚಾರ ಮಾಡಿ. ಯದುವೀರ್ ವಿಚಾರಕ್ಕೆ ಅಪ್ಪಿತಪ್ಪಿಯೂ ಹೋಗಬೇಡಿ. ಯದುವೀರ್ ವಿಚಾರದಲ್ಲಿ ಟೀಕೆ ಮಾಡಿದರೆ ಅದರ ಎಫೆಕ್ಟ್ ಮೈಸೂರು ಮಾತ್ರವಲ್ಲ ಬೇರೆ ಕ್ಷೇತ್ರದ ನಮಗೆ ಆಗುವ ಸಾಧ್ಯತೆಯಿದೆ ಎಂದು ಕಾಂಗ್ರೆಸ್ ಮುಖಂಡರಿಗೆ ಸಿಎಂ ತಿಳಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಜಯೇಂದ್ರನಿಂದ ನಾನು ಪಾಠ ಕಲಿಯಬೇಕಾ: ಸಿದ್ದರಾಮಯ್ಯ ರೋಷಾವೇಷ

ಅಮಾನತು ಮಾಡೋದು, ಮತ್ತೆ ರದ್ದು ಮಾಡೋದು ಎಲ್ಲಾ ನಾಟಕ: ಬಿವೈ ವಿಜಯೇಂದ್ರ

ಕೇರಳ ನರ್ಸ್ ನಿಮಿಷಾ ಪ್ರಿಯಾ ಮರಣದಂಡನೆ ಸಂಪೂರ್ಣವಾಗಿ ರದ್ದು

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Video: ಆಪರೇಷನ್ ಸಿಂಧೂರ್ ಶೌರ್ಯದ ಬಗ್ಗೆ ಹೇಳಿದ್ರೆ ವಿಪಕ್ಷಗಳು ಮೇಜು ತಟ್ಟಲ್ಲ ಯಾಕೆ: ಅನುರಾಗ್ ಠಾಕೂರ್

ಮುಂದಿನ ಸುದ್ದಿ
Show comments