Select Your Language

Notifications

webdunia
webdunia
webdunia
webdunia

ವಾಲ್ಮೀಕಿ ಜಯಂತಿಯಲ್ಲಿ ಭಾಗಿಯಾದ ಸಿಎಂ ಸಿದ್ದರಾಮಯ್ಯ: ನೆಟ್ಟಿಗರಿಂದ ಟ್ರೋಲ್

Siddaramaiah Valmiki Jayanti

Krishnaveni K

ಬೆಂಗಳೂರು , ಗುರುವಾರ, 17 ಅಕ್ಟೋಬರ್ 2024 (12:34 IST)
ಬೆಂಗಳೂರು: ಇಂದು ಮಹರ್ಷಿ ವಾಲ್ಮೀಕಿ ಜಯಂತಿ ಪ್ರಯುಕ್ತ ವಿಧಾನಸೌಧದ ಮುಂಭಾಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಭಾಗವಹಿಸಿದ್ದು, ವಾಲ್ಮೀಕಿ ಮಹರ್ಷಿಗಳ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿದರು.

ಈ ವೇಳೆ ವಾಲ್ಮೀಕಿ ಸಮಾಜದ ರಾಜನಹಳ್ಳಿ ಮಠದ ಪ್ರಸನ್ನಾ ನಂದಪುರಿ ಸ್ವಾಮೀಜಿಗಳು ಸಚಿವರಾದ ಕೆ.ಎನ್.ರಾಜಣ್ಣ, ಸತೀಶ್ ಜಾರಕಿಹೊಳಿ, ಪರಿಶಿಷ್ಠ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ  ಶಾಸಕರಾದ ಬಸವನಗೌಡ ದದ್ದಲ್, ಪ್ರಕಾಶ್ ಹುಕ್ಕೇರಿ ಸೇರಿ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.

ಇನ್ನೊಂದೆಡೆ ಸಿದ್ದರಾಮಯ್ಯ ಅವರು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಶ್ರೀ ವಾಲ್ಮೀಕಿ ಜಯಂತಿ ಪ್ರಯುಕ್ತ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ, ಐದು ಮಹನೀಯರಿಗೆ ವಾಲ್ಮೀಕಿ ಪ್ರಶಸ್ತಿ ವಿತರಿಸಿ ಮಾತನಾಡಿದರು.

ರಾಜನಹಳ್ಳಿ ವಾಲ್ಮೀಕಿ ಸಮುದಾಯದ ಮಠದ ಜಗದ್ಗುರು ಪ್ರಸನ್ನಾ ನಂದಪುರಿ ಶ್ರೀಗಳ ದಿವ್ಯ ಸಾನಿದ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವರಾದ ಸತೀಶ್ ಜಾರಕಿಹೊಳಿ, ಕೆ.ಎನ್.ರಾಜಣ್ಣ, ಹೆಚ್.ಕೆ.ಪಾಟೀಲ್, ಮಾಜಿ ಸಂಸದರಾದ ವಿ.ಎಸ್.ಉಗ್ರಪ್ಪ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಬಸವನಗೌಡ ದದ್ದಲ್,  ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, KKRDB ಅಧ್ಯಕ್ಷರಾದ ಅಜಯ್ ಸಿಂಗ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಹಾಗೂ ವಿಧಾನಸಭೆ ಮತ್ತು ವಿಧಾನಪರಿಷತ್ ಸದಸ್ಯರುಗಳು ಸೇರಿ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.

ಆದರೆ ಸಿಎಂ ಸಿದ್ದರಾಮಯ್ಯ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಭಾಗಿಯಾಗಿರುವ ಫೋಟೋ ಪ್ರಕಟಿಸಿದ್ದಕ್ಕೆ ನೆಟ್ಟಿಗರಿಂದ ಟೀಕೆ ವ್ಯಕ್ತವಾಗಿದೆ. ವಾಲ್ಮೀಕಿ ಹಗರಣದ ವಿಚಾರವ್ನೆತ್ತಿ ಲೂಟಿಕೋರ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮತ್ತೆ ಕೆಲವರು ಮೊದಲು ನಿಮ್ಮ ಶಾಸಕ ನಾಗೇಂದ್ರನಿಗೆ ಫಸ್ಟ್ ಪ್ರೈಸ್ ಕೊಡಿ ಎಂದು ಕಾಲೆಳೆದಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿಯವರು ಹಿಂದೂಗಳ ಕೇಸ್ ತಗೊಂಡ್ರೆ ಸರಿ, ಕಾಂಗ್ರೆಸ್ ನವರು ಮುಸ್ಲಿಮರ ಕೇಸ್ ವಾಪಸ್ ತಗೊಂಡ್ರೆ ತಪ್ಪಾ