Select Your Language

Notifications

webdunia
webdunia
webdunia
webdunia

ಅಂತೂ ಮುಖ್ಯಮಂತ್ರಿ ಪಟ್ಟ ಬಿಡುವ ಕಾಲ ಬಂತು: ನೆಟ್ಟಿಗರಿಂದ ಸಿದ್ದರಾಮಯ್ಯ ಟ್ರೋಲ್

Siddaramaiah

Krishnaveni K

ಬೆಂಗಳೂರು , ಸೋಮವಾರ, 7 ಜುಲೈ 2025 (10:46 IST)
ಬೆಂಗಳೂರು: ಅಂತೂ ನೀವು ಮುಖ್ಯಮಂತ್ರಿ ಪಟ್ಟ ಬಿಟ್ಟು ದೆಹಲಿಗೆ ಹೋಗುವ ಕಾಲ ಬಂದಾಯ್ತು ಎಂದು ನೆಟ್ಟಿಗರು ಸಿಎಂ ಸಿದ್ದರಾಮಯ್ಯನವರನ್ನು ಟ್ರೋಲ್ ಮಾಡಿದ್ದಾರೆ.

ರಾಜ್ಯದಲ್ಲಿ ಈಗ ನಾಯಕತ್ವ ಬದಲಾವಣೆ ವಿಚಾರ ಸದ್ದು ಮಾಡುತ್ತಿದೆ. ಇದರ ನಡುವೆ ಕಾಂಗ್ರೆಸ್ ಒಬಿಸಿ ಮಂಡಳಿಗೆ ಸಿಎಂ ಸಿದ್ದರಾಮಯ್ಯನವರನ್ನು ಆಯ್ಕೆ ಮಾಡಿದೆ. ಈ ಸುದ್ದಿ ಬೆನ್ನಲ್ಲೇ ಸಿದ್ದರಾಮಯ್ಯ ರಾಷ್ಟ್ರ ರಾಜಕಾರಣಕ್ಕೆ ಹೋಗಲಿದ್ದಾರೆ ಎಂದು ದೊಡ್ಡ ಸುದ್ದಿಯಾಗಿದೆ.

ಆದರೆ ಅದಕ್ಕೀಗ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದು ಎಐಸಿಸಿಯ ಹಿಂದುಳಿದ ವರ್ಗಗಳ ಸಲಹಾ ಮಂಡಳಿ ಸದಸ್ಯರಾಗಿ ನನ್ನನ್ನು ನೇಮಕ ಮಾಡಲಾಗಿದೆ. ಮಾಧ್ಯಮಗಳು ಇದನ್ನು ತಪ್ಪಾಗಿ ಅರ್ಥೈಸಿ ಮಂಡಳಿಯ ಅಧ್ಯಕ್ಷರಾಗಿ ನನ್ನ ನೇಮಕ ಮಾಡಲಾಗಿದೆ ಎಂದು ವರದಿ‌ ಮಾಡಿವೆ. ಇದು ತಪ್ಪು ಮಾಹಿತಿಯಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.

ಇದಕ್ಕೆ ಕಾಮೆಂಟ್ ಮಾಡಿರುವ ನೆಟ್ಟಿಗರು ಅಂತೂ ನೀವು ರಾಜ್ಯ ರಾಜಕಾರಣ ಬಿಡುವ ಕಾಲ ಬಂದಾಯ್ತು ಎಂದಿದ್ದಾರೆ. ಮುಖ್ಯಮಂತ್ರಿ ಸ್ಥಾನವನ್ನು ಡಿಕೆ ಶಿವಕುಮಾರ್ ಗೆ ಬಿಟ್ಟುಕೊಡಲು ತಯಾರಿಲ್ಲ. ಅದಕ್ಕೆ ಹೈಕಮಾಂಡ್ ನವರೇ ನಿಮ್ಮನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ಸಂಚು ಮಾಡಿದ್ದಾರೆ ಎಂದು ನೆಟ್ಟಿಗರು ಕಾಲೆಳೆದಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಹಳೇ ಗರ್ಲ್ ಫ್ರೆಂಡ್ ಗೆ ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಮರ್ಮಾಂಗಕ್ಕೆ ಥಳಿಸಿ ಹಲ್ಲೆ