Webdunia - Bharat's app for daily news and videos

Install App

ಸಿಎಂ ಸಿದ್ದರಾಮಯ್ಯರಿಂದ ಕುತಂತ್ರ ರಾಜಕಾರಣ: ಕುಮಾರಸ್ವಾಮಿ

Webdunia
ಗುರುವಾರ, 4 ಮೇ 2017 (13:49 IST)
ಮುಖ್ಯಮಂತ್ರಿ ಸಿದ್ದರಾಮಯ್ಯ ಕುತಂತ್ರ ರಾಜಕಾರಣ ಮಾಡುತ್ತಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.
 
ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಅರಕೇರಾ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಪಕ್ಷವನ್ನು ಒಡೆದು, ಜೆಡಿಎಸ್ ನಾಯಕರನ್ನು ಕಾಂಗ್ರೆಸ್ ಪಕ್ಷಕ್ಕೆ ಸೆಳೆಯುವ ಹುನ್ನಾರ ನಡೆಸಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
 
ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಕುರಿತಂತೆ ಸಿಎಂ ಕಚೇರಿಯಲ್ಲಿಯೇ ಪ್ಲಾಂಟ್ ಮಾಡಲಾಗಿದೆ. ಜೆಡಿಎಸ್ ಪಕ್ಷದಲ್ಲಿ ಒಡಕು ಉಂಟು ಮಾಡಲು ಸಿದ್ದರಾಮಯ್ಯ ಸಂಚು ರೂಪಿಸಿದ್ದಾರೆ ಎಂದು ಕಿಡಿಕಾರಿದ್ದಾರೆ.
 
ಜೆಡಿಎಸ್ ಪಕ್ಷ ರಾಜ್ಯದ ಎಲ್ಲಾ 224 ವಿಧಾನಸಭಾ ಕ್ಷೇತ್ರಗಳಲ್ಲಿ ಚುನಾವಣೆಗೆ ಸ್ಪರ್ಧಿಸಲಿದೆ. ಯಾವುದೇ ಪಕ್ಷದೊಂದಿಗೆ ಮೈತ್ರಿ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ತಿಳಿಸಿದ್ದಾರೆ. 
 
ಜೆಡಿಎಸ್ ಪಕ್ಷದ ಎಲ್.ಆರ್.ಶಿವರಾಮೇಗೌಡ, ಮರಿಲಿಂಗೇಗೌಡ ಮತ್ತು ಭೋಜೇಗೌಡರನ್ನು ಪಕ್ಷದ ವಕ್ತಾರರನ್ನಾಗಿ ನೇಮಕ ಮಾಡಲಾಗಿದೆ ಎಂದು ಮಾಜಿ ಸಿಎಂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments