ಬೆಂಗಳೂರು: ಎಸ್‌ಸಿಸಿಪಿ/ಟಿ.ಎಸ್.ಪಿ ರಾಜ್ಯ ಅಭಿವೃದ್ದಿ ಪರಿಷತ್ ಸಭೆಯ ಬಳಿಕ ಚಾಮರಾಜಪೇಟೆಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಅನಿರೀಕ್ಷಿತ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಸಿದ್ದರಾಮಯ್ಯ ಅಕ್ಷರಶಃ ಮಕ್ಕಳ ಪಾಲಿಗೆ ಮೇಸ್ಟ್ರಾದರು.
ಸಂಧಿ ಎಂದರೇನು? ಸಂಧಿಗಳಲ್ಲಿ ಎಷ್ಟು ವಿಧ? ಕನ್ನಡ ಅಕ್ಷರ ಮಾಲೆಯಲ್ಲಿ ಎಷ್ಟು ಅಕ್ಷರಗಳಿವೆ? ಅವಲ್ಲಿ ಯೋಗವಾಹಗಳು ಎಷ್ಟು? ಸ್ವರ ಎಂದರೇನು? ವ್ಯಂಜನಗಳು ಎಂದರೇನು? ಎಷ್ಟಿವೆ? ವರ್ಗೀಯ, ಅವರ್ಗೀಯ ವ್ಯಂಜನಗಳು ಎಷ್ಟಿವೆ? ಅಲ್ಪಪ್ರಾಣ, ಮಹಾಪ್ರಾಣ ಎಂದರೇನು? ಅಲ್ಪ ಪ್ರಾಣಕ್ಕೆ ಉದಾಹರಣೆ ಹೇಳಿ ಎನ್ನುವ ಪ್ರಶ್ನೆಗಳನ್ನು ಮಕ್ಕಳಿಗೆ ಕೇಳಿದ ಸಿಎಂ ಮಕ್ಕಳ ಉತ್ತರಗಳನ್ನು ತಿದ್ದಿ ಹೇಳಿದರು.
ಮೊರಾರ್ಜಿ ದೇಸಾಯಿ ಶಾಲೆಗಳನ್ನು ರಾಜ್ಯದಲ್ಲಿ ಯಾರು , ಯಾವಾಗ ಆರಂಭಿಸಿದರು ಎಂದು ಸಿಎಂ ಪ್ರಶ್ನೆ.
ನೀವೇ ಆರಂಭಿಸಿದ್ದು ಎಂದ ವಿದ್ಯಾರ್ಥಿ ಇಸವಿ ಹೇಳಲಿಲ್ಲ.
ಬಳಿಕ 94-95 ರಲ್ಲಿ ಆರಂಭಿಸಿದ್ದಾಗಿ ಸಿಎಂ ಹೇಳಿದರು.