Publish Date: Fri, 15 Sep 2017 (15:20 IST)
Updated Date: Fri, 15 Sep 2017 (15:22 IST)
ಸಿಎಂ ಸಿದ್ದರಾಮಯ್ಯ ರಾಜ್ಯದ ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆರೋಪಿಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಶಿಕ್ಷಕರು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಸಮಸ್ಯೆಗಳನ್ನು ಪರಿಹರಿಸುವಲ್ಲಿ ಸರಕಾರ ಸಂಪೂರ್ಣ ವಿಫಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ವಿಧಾನಪರಿಷತ್ ಸದಸ್ಯರು ಕೂಗಳತೆಯ ದೂರದಲ್ಲಿ ಪ್ರತಿಭಟನೆ ನಡೆಸುತ್ತಿದ್ದರೂ ಸಿಎಂ ಅವರನ್ನು ಭೇಟಿ ಮಾಡುವ ಗೋಜಿಗೆ ಹೋಗದಿರುವುದು ವಿಷಾದನೀಯ ಎಂದು ತಿಳಿಸಿದ್ದಾರೆ.
ಇಂದು ಸಂಜೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯಲಿರುವ ವಿಧಾನಪರಿಷತ್ ಸದಸ್ಯರ ಸಭೆಯಲ್ಲಿ ಶಿಕ್ಷಕರ ಸಮಸ್ಯೆಗಳನ್ನು ಬಗೆಹರಿಸಬೇಕು. ವಿಧಾನಪರಿಷತ್ ಸದಸ್ಯರಿಗೆ ಬಿಜೆಪಿ ಸಂಪೂರ್ಣ ಬೆಂಬಲ ನೀಡಲು ಸಿದ್ದವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.