Select Your Language

Notifications

webdunia
webdunia
webdunia
webdunia

ಬಜೆಟ್ ಮಂಡನೆ ಬಳಿಕ ಸುಸ್ತಾದ ಸಿಎಂ ಸಿದ್ದುಗೆ ಅನಾರೋಗ್ಯ

Siddaramaiah

Krishnaveni K

ಬೆಂಗಳೂರು , ಸೋಮವಾರ, 19 ಫೆಬ್ರವರಿ 2024 (13:56 IST)
ಬೆಂಗಳೂರು: ಬಜೆಟ್ ಅಧಿವೇಶನ ಜೊತೆಗೆ ಜಿಲ್ಲಾ ಪ್ರವಾಸದಿಂದಾಗಿ ಸುಸ್ತಾಗಿರುವ ಸಿಎಂ ಸಿದ್ದರಾಮಯ್ಯಗೆ ಸಣ್ಣ ಪ್ರಮಾಣದಲ್ಲಿ ಅನಾರೋಗ್ಯ ಕಾಣಿಸಿಕೊಂಡಿದೆ.

ಸಿಎಂ ಸಿದ್ದರಾಮಯ್ಯ ಮೊನ್ನೆಯಿಂದಲೂ ಸತತ ಓಡಾಟ ನಡೆಸುತ್ತಿದ್ದಾರೆ. ಕೇಂದ್ರದ ವಿರುದ್ಧ ಹೋರಾಟ, ಅಧಿವೇಶನ ಜೊತೆಗೆ ಸಮಾವೇಶಗಳಲ್ಲಿ ಸತತವಾಗಿ ಪಾಲ್ಗೊಂಡಿದ್ದಾರೆ. ಹೀಗಾಗಿ ಅವರಿಗೆ ಅನಾರೋಗ್ಯ, ಸುಸ್ತು ಕಾಣಿಸಿಕೊಂಡಿದೆ. ಹೀಗಾಗಿ ಕಾವೇರಿ ನಿವಾಸಕ್ಕೆ ವಿಶ್ರಾಂತಿಗೆ ತೆರಳಿದ್ದಾರೆ.

ಇಂದು ಮಧ್ಯಾಹ್ನದ ಬಳಿಕದ ಸೆಷನ್ ಗೆ ವಿಧಾನಸೌಧಕ್ಕೆ ಆಗಮಿಸುವ ನಿರೀಕ್ಷೆಯಿದೆ. ಬಜೆಟ್ ಅಧಿವೇಶನದ ಜೊತೆಗೆ ಸಮಾವೇಶದಲ್ಲಿ ನಿರಂತರವಾಗಿ ಮಾತನಾಡಿ ಸಿಎಂ ಸಿದ್ದುಗೆ ಗಂಟಲು ನೋವು ಕಾಣಿಸಿಕೊಂಡಿದೆ. ಹೀಗಾಗಿ ವೈದ್ಯರು ವಿಶ್ರಾಂತಿಗೆ ಸೂಚಿಸಿದ್ದಾರೆ. ಮಂಗಳೂರಿನಲ್ಲಿ ಸಮಾವೇಶ ಬಳಿಕ ಮಂಡ್ಯದ ಮಳವಳಿಯಲ್ಲೂ ಸಮಾವೇಶದಲ್ಲಿ ಭಾಷಣ ಮಾಡಿದ್ದರು.

ಸಿದ್ದುಗೆ ರಿಲೀಫ್ ನೀಡಿದ ಸುಪ್ರೀಂಕೋರ್ಟ್: ಕಳೆದ ವರ್ಷ ರಸ್ತೆ ತಡೆದು ಪ್ರತಿಭಟನೆ ಮಾಡಿದ ಪ್ರಕರಣಲ್ಲಿ ಹೈಕೋರ್ಟ್ ಸಿಎಂ ಸಿದ್ದರಾಮಯ್ಯಗೆ ಇತ್ತೀಚೆಗೆ 10 ಸಾವಿರ ರೂ. ದಂಡ ವಿಧಿಸಿತ್ತು. ಇದನ್ನು ಪ್ರಶ್ನಿಸಿ ಅವರು ಸುಪ್ರೀಂ ಕೋರ್ಟ್ ನಲ್ಲಿ ಪ್ರಕರಣ ದಾಖಲಿಸಿದ್ದರು. ಇದೀಗ ಸುಪ್ರೀಂಕೋರ್ಟ್ ನಲ್ಲಿ ಸಿದ್ದರಾಮಯ್ಯಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಮುಂದಿನ ಆದೇಶದವರೆಗೆ ಸಿಎಂ ಸಿದ್ದರಾಮಯ್ಯ ವಿರುದ್ಧ ಕ್ರಿಮಿನಲ್ ವಿಚಾರಣೆ ನಡೆಸದಂತೆ ತಡೆ ನೀಡಿದೆ. ಆರು ವಾರಗಳೊಳಗಾಗಿ ಪ್ರತಿಕ್ರಿಯೆ ನೀಡುವಂತೆ ಕೋರ್ಟ್ ಸೂಚಿಸಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಪ್ರಧಾನ ಮಂತ್ರಿ ಮಾತೃ ವಂದನ ಯೋಜನೆ ಯಾರಿಗೆ ಅನುಕೂಲ ತಿಳಿಯಿರಿ