Select Your Language

Notifications

webdunia
webdunia
webdunia
webdunia

ಶಿರಾಡಿ ಘಾಟ್ ಗುಡ್ಡ ಕುಸಿತಕ್ಕೆ ಕಾರಣ ತಿಳಿದು ಗರಂ ಸಿಎಂ ಸಿದ್ದರಾಮಯ್ಯ

ಶಿರಾಡಿ ಘಾಟ್ ಗುಡ್ಡ ಕುಸಿತಕ್ಕೆ ಕಾರಣ ತಿಳಿದು ಗರಂ ಸಿಎಂ ಸಿದ್ದರಾಮಯ್ಯ

Sampriya

ಶಿರಾಡಿ , ಶನಿವಾರ, 3 ಆಗಸ್ಟ್ 2024 (18:47 IST)
Photo Courtesy X
ಶಿರಾಡಿ: ಭಾರೀ ಮಳೆಗೆ ಇಲ್ಲಿ ಭೂಕುಸಿತವಾಗಿರುವ ಶಿರಾಡಿ ಘಾಟ್‌ಗೆ ಸಿಎಂ ಸಿದ್ದರಾಮಯ್ಯ ಅವರು ಭೇಟಿ ನೀಡಿ, ಗುಡ್ಡ ಕುಸಿತಕ್ಕೆ ಕಾರಣ ಏನೆಂದು ಪರಿಶೀಲಿಸಿದರು.

ಭೇಟಿ ಸಂಬಂಧ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಸಿಎಂ ಸಿದ್ದರಾಮಯ್ಯ ಅವರು, ಶಿರಾಡಿ ಘಾಟ್ ಗುಡ್ಡ ಕುಸಿತದ ಸ್ಥಳಕ್ಕೆ ಇಂದು ಭೇಟಿನೀಡಿ, ಸ್ಥಳ ಪರಿಶೀಲನೆ ನಡೆಸುವ ವೇಳೆ ಅವೈಜ್ಞಾನಿಕ ಕಾಮಗಾರಿ ಕಂಡುಬಂದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪ್ರಾದೇಶಿಕ ಅಧಿಕಾರಿಗೆ ಕೆಲವು ಕಟ್ಟುನಿಟ್ಟಿನ ಸೂಚನೆ ನೀಡಿದೆ.

ರಸ್ತೆ ನಿರ್ಮಾಣಕ್ಕಾಗಿ ಗುಡ್ಡಗಳನ್ನು 90 ಡಿಗ್ರಿಯಲ್ಲಿ ನೇರವಾಗಿ ಸೀಳಿರುವುದೇ ಗುಡ್ಡ ಕುಸಿತಕ್ಕೆ ಪ್ರಮುಖ ಕಾರಣವಾಗಿದೆ. ಒಟ್ಟು 45 ಕಿಮೀ ನಲ್ಲಿ 35 ಕಿಮೀ ಹೆದ್ದಾರಿ ಕಾಮಗಾರಿ ಮುಗಿದಿದೆ. ಆದರೆ ಇಲ್ಲಿಯವರೆಗೂ ಎಲ್ಲೂ ತಡೆಗೋಡೆಗಳನ್ಜು ನಿರ್ಮಿಸಿಲ್ಲ, ಮಣ್ಣಿನ ಗುಣಮಟ್ಟ ಪರೀಕ್ಷೆ ನಡೆಸಿ ಅದರ ಆಧಾರದಲ್ಲಿ ಸುರಕ್ಷತಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿಲ್ಲ.

ಹಣ ಉಳಿಸುವ ಉದ್ದೇಶದಿಂದ ಕಡಿಮೆ ಭೂಮಿ ಸ್ವಾಧೀನಪಡಿಸಿಕೊಂಡು, ಬಳಿಕ ಖರ್ಚು ಉಳಿಸಲು 90 ಡಿಗ್ರಿಯಲ್ಲಿ ಗುಡ್ಡಗಳನ್ನು ಕತ್ತರಿಸಲಾಗಿದೆ. ಇದು ಅವೈಜ್ಞಾನಿಕ ಕಾಮಗಾರಿ ಅಲ್ಲವೇ?
ಗುಡ್ಡಗಳನ್ನು 30 ರಿಂದ 45 ಡಿಗ್ರಿಯಲ್ಲಿ ಕತ್ತರಿಸಿ ತಡೆಗೋಡೆ ನಿರ್ಮಿಸಿದ್ದರೆ ಮಣ್ಣು ಕುಸಿತವನ್ನು ತಡೆಯಬಹುದಿತ್ತು.

ಕಾಮಗಾರಿ ಆರಂಭಿಸುವ ಮೊದಲು ಮಣ್ಣಿನ ಗುಣಮಟ್ಟ ಪರೀಕ್ಷೆ ನಡೆಸಿದ್ದೀರಾ? ಅದಕ್ಕೆ ತಕ್ಕಂತೆ ಮುಂಜಾಗ್ರತಾ ಕ್ರಮ ವಹಿಸಬೇಕಿತ್ತು. ಇಲ್ಲಿನ ಒಟ್ಟಾರೆ ಸ್ಥಿತಿ ಗತಿ ಕುರಿತು ಕೇಂದ್ರ ಸಚಿವರಾದ ಗಡ್ಕರಿ ಅವರಿಗೆ ಸರ್ಕಾರದಿಂದ ಪತ್ರ ಬರೆಯುತ್ತೇವೆ.

ಹೆದ್ದಾರಿಗಳಲ್ಲಿ ಸಂಚರಿಸುವ ವಾಹನ ಸವಾರರ ಹಿತದೃಷ್ಟಿಯಿಂದ ಯಾವುದೇ ಕಾರಣಕ್ಕೂ ನಾವು ಇಂತಹ ವರ್ತನೆಯನ್ನು ಸಹಿಸುವುದಿಲ್ಲ.

Share this Story:

Follow Webdunia kannada

ಮುಂದಿನ ಸುದ್ದಿ

ಜೈ ಶ್ರೀರಾಮ್‌ ಕೂಗುವ ಬಿಜೆಪಿಗರಿಗೆ ಆದರ್ಶವಾಗಿರುವುದು ಕೀಚಕ, ದುಷ್ಯಾಸನರೇ ಹೊರತು ರಾಮನಲ್ಲ: ಕಾಂಗ್ರೆಸ್