Publish Date: Mon, 09 Oct 2017 (14:02 IST)
Updated Date: Mon, 09 Oct 2017 (14:04 IST)
ಹತ್ತು ದಿನಗಳೊಳಗಾಗಿ ರಸ್ತೆಗಳಲ್ಲಿರುವ ಗುಂಡಿಗಳನ್ನು ಮುಚ್ಚಿ ಹಾಕಿ ಇಲ್ಲಾಂದ್ರೆ ಕಠಿಣ ಕ್ರಮ ಜರುಗಿಸಬೇಕಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.
ನಾಯುಂಡಹಳ್ಳಿಗೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ, ರಸ್ತೆ ಗುಂಡಿಯಿಂದಾಗಿ ಮೃತಪಟ್ಟಿದ್ದ ಮಹಿಳೆಯ ಬಗ್ಗೆ ಸಂಪೂರ್ಣವಾಗಿ ವಿವರಣೆ ಪಡೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಭಾರಿ ಮಳೆಯಿಂದಾಗಿ ನಗರದ ಪ್ರಮುಖ ರಸ್ತೆಗಳಲ್ಲಿರುವ ಗುಂಡಿಗಳಿಂದಾಗಿ ಪ್ರಯಾಣಿಕರು ಪ್ರಾಣ ಕಳೆದುಕೊಳ್ಳುವಂತಾಗಿದೆ ಎಂದು ವಿಪಕ್ಷ ನಾಯಕರು ಆರೋಪಿಸಿದ್ದಾರೆ.
ಮುಂದಿನ 10 ದಿನಗಳವರೆಗೆ ನಾನು ಕಾದು ನೋಡುತ್ತೇನೆ. ಅಲ್ಲಿಯವರೆಗೆ ರಸ್ತೆ ಗುಂಡಿಗಳನ್ನು ಮುಚ್ಚದಿದ್ದಲ್ಲಿ ಅಂತಹ ಅಧಿಕಾರಿಯನ್ನೇ ಹೊಣೆಯಾಗಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.