ಮೈಸೂರು: ಭಾನು ಮುಷ್ತಾಕ್ ದಸರಾ ಉದ್ಘಾಟನೆ ಮಾಡುತ್ತಿರುವ ವಿಚಾರದಲ್ಲಿ ಕೋರ್ಟ್ ಮೆಟ್ಟಿಲೇರಿರುವ ಪ್ರತಾಪ್ ಸಿಂಹಗೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ಶಾಂತಿಗೆ ಭಂಗ ತಂದ್ರೆ ಪೊಲೀಸರೇ ನೋಡಿಕೊಳ್ತಾರೆ ಎಂದಿದ್ದಾರೆ.
ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ದಸರಾ ಉದ್ಘಾಟನೆಗೆ ಸಾಹಿತಿ ಬಾನು ಮುಷ್ತಾಕ್ ಅವರಿಗೆ ಅವಕಾಶ ಕೊಡಬಾರದು ಎಂದು ಪ್ರತಾಪ್ ಸಿಂಹ ಅವರು ನ್ಯಾಯಾಲಯಕ್ಕೆ ಅರ್ಜಿ ಹಾಕಿದ್ದಾರೆ. ನ್ಯಾಯಾಲಯದಲ್ಲಿ ವಿಷಯ ಇತ್ಯರ್ಥವಾಗಲಿ. ದಸರಾ ಒಂದು ಧರ್ಮಕ್ಕೆ ಸೇರಿದ ಕಾರ್ಯಕ್ರಮವಲ್ಲ. ಸಾಂಸ್ಕೃತಿಕವಾಗಿ ಎಲ್ಲ ಧರ್ಮದ ಜನರು ಇದರಲ್ಲಿ ಭಾಗವಹಿಸುತ್ತಾರೆ. ದಸರಾ ನಾಡಹಬ್ಬವಾಗಿದ್ದು, ಒಂದು ಧರ್ಮದವರು ಮಾತ್ರ ಭಾಗವಹಿಸಬೇಕು ಎಂದೇನೂ ಇಲ್ಲ. ಸಾರ್ವತ್ರಿಕ ಹಬ್ಬದಲ್ಲಿ ಎಲ್ಲ ಜಾತಿ ಮತ್ತು ಧರ್ಮದವರು ಭಾಗವಹಿಸಬಹುದು.
ಬಿಜೆಪಿಯ ಮಾಜಿ ಸಂಸದ ಪ್ರತಾಪ್ ಸಿಂಹ ಸಮಾಜದ ಶಾಂತಿಭಂಗ ಮಾಡುವ ಕೆಲಸ ಮಾಡಿದರೆ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ ಎಂದು ಎಚ್ಚರಿಕೆ ನೀಡಿದ್ದಾರೆ.