Webdunia - Bharat's app for daily news and videos

Install App

ಪ್ರತಾಪ್ ಸಿಂಹ ಶಾಂತಿಗೆ ಭಂಗ ತಂದ್ರೆ ಪೊಲೀಸರೇ ನೋಡಿಕೊಳ್ತಾರೆ: ಸಿದ್ದರಾಮಯ್ಯ ಎಚ್ಚರಿಕೆ

Krishnaveni K
ಶನಿವಾರ, 13 ಸೆಪ್ಟಂಬರ್ 2025 (14:56 IST)
ಮೈಸೂರು: ಭಾನು ಮುಷ್ತಾಕ್ ದಸರಾ ಉದ್ಘಾಟನೆ ಮಾಡುತ್ತಿರುವ ವಿಚಾರದಲ್ಲಿ ಕೋರ್ಟ್ ಮೆಟ್ಟಿಲೇರಿರುವ ಪ್ರತಾಪ್ ಸಿಂಹಗೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ಶಾಂತಿಗೆ ಭಂಗ ತಂದ್ರೆ ಪೊಲೀಸರೇ ನೋಡಿಕೊಳ್ತಾರೆ ಎಂದಿದ್ದಾರೆ.

ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ‘ದಸರಾ ಉದ್ಘಾಟನೆಗೆ ಸಾಹಿತಿ ಬಾನು ಮುಷ್ತಾಕ್ ಅವರಿಗೆ ಅವಕಾಶ ಕೊಡಬಾರದು ಎಂದು ಪ್ರತಾಪ್ ಸಿಂಹ ಅವರು ನ್ಯಾಯಾಲಯಕ್ಕೆ ಅರ್ಜಿ ಹಾಕಿದ್ದಾರೆ.  ನ್ಯಾಯಾಲಯದಲ್ಲಿ ವಿಷಯ ಇತ್ಯರ್ಥವಾಗಲಿ. ದಸರಾ ಒಂದು ಧರ್ಮಕ್ಕೆ ಸೇರಿದ ಕಾರ್ಯಕ್ರಮವಲ್ಲ. ಸಾಂಸ್ಕೃತಿಕವಾಗಿ ಎಲ್ಲ ಧರ್ಮದ ಜನರು ಇದರಲ್ಲಿ ಭಾಗವಹಿಸುತ್ತಾರೆ. ದಸರಾ ನಾಡಹಬ್ಬವಾಗಿದ್ದು, ಒಂದು ಧರ್ಮದವರು ಮಾತ್ರ ಭಾಗವಹಿಸಬೇಕು ಎಂದೇನೂ ಇಲ್ಲ. ಸಾರ್ವತ್ರಿಕ ಹಬ್ಬದಲ್ಲಿ ಎಲ್ಲ ಜಾತಿ ಮತ್ತು ಧರ್ಮದವರು ಭಾಗವಹಿಸಬಹುದು.

ಬಿಜೆಪಿಯ ಮಾಜಿ ಸಂಸದ ಪ್ರತಾಪ್ ಸಿಂಹ ಸಮಾಜದ ಶಾಂತಿಭಂಗ ಮಾಡುವ ಕೆಲಸ ಮಾಡಿದರೆ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ’ ಎಂದು ಎಚ್ಚರಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫಿಲಿಪೈನ್ಸ್‌ ಸಂಕಷ್ಟಕ್ಕೆ ಭಾರತ ಜತೆಯಾಗಿ ನಿಲ್ಲುತ್ತದೆ: ಪ್ರಧಾನಿ ಮೋದಿ

ಕರೂರು ಕಾಲ್ತುಳಿತ ದುರಂತ ಇಫೆಕ್ಟ್: ಟಿವಿಕೆ ನಾಯಕ ವಿಜಯ್ ಮಹತ್ವದ ತೀರ್ಮಾನ

ಫಿಲಿಪೈನ್ಸ್‌ನಲ್ಲಿ ಪ್ರಬಲ ಭೂಕಂಪ: ಕ್ಷಣಾರ್ಧದಲ್ಲಿ ಧರೆಗುಳಿದ ಕಟ್ಟಡಗಳು, ಮೃತರ ಸಂಖ್ಯೆ 69ಕ್ಕೆ ಏರಿಕೆ

ಮಲ್ಲಿಕಾರ್ಜುನ ಖರ್ಗೆಗೆ ನಿಜಕ್ಕೂ ಆಗಿದ್ದೇನು, ಪುತ್ರ ಪ್ರಿಯಾಂಕ್ ಖರ್ಗೆ ಕೊಟ್ರು ಅಪ್ ಡೇಟ್

ಆಯುಧ ಪೂಜೆಯಿದ್ದರೂ ಹಿಂದೂ ಶಿಕ್ಷಕರಿಗೆ ಗಣತಿ ಮಾಡಲು ಒತ್ತಾಯ: ಸಿಟಿ ರವಿ ಕಿಡಿ

ಮುಂದಿನ ಸುದ್ದಿ
Show comments