ಬೆಂಗಳೂರು: ಹಸಿವಿನ ಸಂಕಟ ತಿಳಿದಿರುವುದರಿಂದ ನಾನು ಅನ್ನಭಾಗ್ಯ ಯೋಜನೆಯನ್ನು ಜಾರಿಗೆ ತಂದೆ. ಈ ಹಿನ್ನೆಲೆ ಕಾಳಸಂತೆಯಲ್ಲಿ ಯಾರೇ ಅನ್ನ ಭಾಗ್ಯ ಅಕ್ಕಿಯನ್ನು ಮಾರಾಟ ಮಾಡುವುದು ಕಂಡುಬಂದಲ್ಲಿ ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇನೆಂದು ಸಿಎಂ ಸಿದ್ದರಾಮಯ್ಯ ಎಚ್ಚರಿಸಿದ್ದಾರೆ.
ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ವಿಶ್ವ ಆಹಾರ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕವಿ ಬೇಂದ್ರೆಯವರು ರೈತರನ್ನು ಅನ್ನಬ್ರಹ್ಮ ಎಂದು ಕರೆದಿದ್ದಾರೆ. ಆದ್ದರಿಂದ ಅನ್ನ ವ್ಯರ್ಥ ಮಾಡುವುದು, ಬಿಸಾಡುವುದು ಅನ್ನಬ್ರಹ್ಮನಿಗೆ ಮಾಡುವ ಅವಮಾನ ಎಂದರು.
ಒಂದು ಸಮಯದಲ್ಲಿ ನಾವು ಅಮೆರಿಕದ ಮೇಲೆ ಅವಲಂಬಿತರಾಗಿದ್ದೆವು, ಈಗ ನಾವೇ ವಿದೇಶಗಳಿಗೆ ರಫ್ತು ಮಾಡುವ ಮಟ್ಟಿಗೆ ಪ್ರಗತಿ ಸಾಧಿಸಿದ್ದೇವೆ ಎಂದರು.