Select Your Language

Notifications

webdunia
webdunia
webdunia
webdunia

ಬೆಂಗಳೂರಿಗೆ ಆಗಮಿಸಿದ ರಾಹುಲ್‌ ಗಾಂಧಿಗೆ ಸ್ವಾಗತಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರಿಗೆ ಆಗಮಿಸಿದ ರಾಹುಲ್‌ ಗಾಂಧಿಗೆ ಸ್ವಾಗತಿಸಿದ ಸಿಎಂ ಸಿದ್ದರಾಮಯ್ಯ

sampriya

ಬೆಂಗಳೂರು , ಶುಕ್ರವಾರ, 7 ಜೂನ್ 2024 (09:48 IST)
Photo By X
ಬೆಂಗಳೂರು: ಸಿಟಿ ಸಿವಿಲ್ ನ್ಯಾಯಾಲಯಕ್ಕೆ ಹಾಜರಾಗಲು ಇಂದು ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ ಕೆ ಶಿವಕುಮಾರ್  ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡರು.

ಇನ್ನೂ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಅದ್ಭುತ ಪ್ರದರ್ಶನ ಸಾಧಿಸಿದ್ದಕ್ಕೆ ಶುಭಹಾರೈಸಿದರು.

2023ರಲ್ಲಿ ಅಂದಿನ ಬಿಜೆಪಿ ಸರ್ಕಾರದ ವಿರುದ್ಧ ಪತ್ರಿಕೆಗಳಲ್ಲಿ ಜಾಹೀರಾತು ನೀಡಿ ವರ್ಚಸ್ಸಿಗೆ ಧಕ್ಕೆ ತಂದ ಆರೋಪದಡಿ ದಾಖಲಿಸಲಾಗಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ರಾಹುಲ್‌ ಗಾಂಧಿ
ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ. ವಿಧಾನ ಪರಿಷತ್‌ ಸದಸ್ಯ ಬಿಜೆಪಿ ಮುಖಂಡ ಕೇಶವ ಪ್ರಸಾದ್ ಅವರು ಈ ಸಂಬಂಧ ಐಪಿಸಿ ಸೆಕ್ಷನ್ 499 ಹಾಗೂ 500 ಅಡಿಯಲ್ಲಿ ಖಾಸಗಿ ದೂರು ಸಲ್ಲಿಸಿದ್ದರು.

ಇಂದು ಬೆಂಗಳೂರಿಗೆ ಆಗಮಿಸಿ ಬಿಜೆಪಿ ದಾಖಲಿಸಿದ್ದ ಖಾಸಗಿ ಮಾನನಷ್ಟ ಮೊಕದ್ದಮೆ ಸಂಬಂಧ ಸಿಟಿ ಸಿವಿಲ್‌ ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಡಾ.ಸಿ.ಎನ್‌ ಮಂಜುನಾಥ್‌ ಗೆಲುವಿಗೆ ಮುಡಿಕೊಟ್ಟು ಹರಕೆ ತೀರಿಸಿದ ಮುಸ್ಲಿಂ ವ್ಯಕ್ತಿ