Select Your Language

Notifications

webdunia
webdunia
webdunia
webdunia

ಸರ್ಕಾರಿ ಬಸ್‌ನಲ್ಲಿ ಪ್ರಯಾಣಿಸಿದ ಸಿಎಂ ಸಿದ್ದರಾಮಯ್ಯ

ಸರ್ಕಾರಿ ಬಸ್‌ನಲ್ಲಿ ಪ್ರಯಾಣಿಸಿದ ಸಿಎಂ ಸಿದ್ದರಾಮಯ್ಯ
ಹುಬ್ಬಳ್ಳಿ , ಗುರುವಾರ, 20 ಜುಲೈ 2017 (13:07 IST)
ಬಸ್ ದಿನಾಚರಣೆಯ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಇಂದು ಬಸ್‌ನಲ್ಲಿ ಪ್ರಯಾಣಿಸಿ ಪ್ರಯಾಣಿಕರಿಗೆ ಅಚ್ಚರಿ ಮೂಡಿಸಿದ ಘಟನೆ ನಡೆದಿದೆ.
 
ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಧಾರವಾಡದ ಬಸ್ ನಿಲ್ದಾಣದವರೆಗೆ ಸಿಎಂ ಸಿದ್ದರಾಮಯ್ಯ ಬಸ್‌‌ನಲ್ಲಿ ಪ್ರಯಾಣಿಸಿದ್ದಾರೆ. ಮುಖ್ಯಮಂತ್ರಿಯೊಂದಿಗೆ ಸಚಿವ ವಿನಯ್ ಕುಲ್ಕರ್ಣಿ ಸೇರಿದಂತೆ ಇತರ ಗಣ್ಯರು ಸಾಥ್ ನೀಡಿದರು.
 
ಸಿಎಂ ಸಿದ್ದರಾಮಯ್ಯ ನಗರಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮಹಾನಗರಪಾಲಿಕೆ ಸಿಎಂ ಹಾದು ಹೋಗುವ ಮಾರ್ಗಗಳಲ್ಲಿ ಮಾತ್ರ ರಾಶಿ ರಾಶಿ ಕಸವನ್ನು ಸ್ವಚ್ಚಗೊಳಿಸುವ ಕಾರ್ಯಕ್ಕೆ ಮುಂದಾಗಿದೆ.
 
ಮುಖ್ಯಮಂತ್ರಿಗಳು ಮಾತ್ರ ಸಾಗುವ ಮಾರ್ಗದಲ್ಲಿ ರಸ್ತೆಗಳನ್ನು ಸ್ವಚ್ಚಗೊಳಿಸುತ್ತಿರುವ ಮಹಾನಗರ ಪಾಲಿಕೆಗೆ ಸ್ಥಳೀಯರು ಹಿಡಿಶಾಪ ಹಾಕಿ, ಇತರ ಮಾರ್ಗಗಳನ್ನು ಯಾಕೆ ಸ್ವಚ್ಚಗೊಳಿಸಬಾರದು ಎಂದು ಕಿಡಿಕಾರಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಗೊಡ್ಸೆ ಹಿಮ್ಮೆಟ್ಟಿಸಿ ಗಾಂಧೀಜಿ ರಕ್ಷಣೆಗೆ ನಿಂತಿದ್ಧ ಭಿಲಾರೆ ಗುರೂಜಿ ಇನ್ನಿಲ್ಲ