Webdunia - Bharat's app for daily news and videos

Install App

ಕಾರಿನಲ್ಲೇ ಕುಳಿತು ಚಾಮುಂಡಿ ತಾಯಿಗೆ ಪೂಜೆ ಸಲ್ಲಿಸಿದ್ದ ಸಿದ್ದರಾಮಯ್ಯ ಪತ್ನಿ ಪಾರ್ವತಿ

Krishnaveni K
ಶನಿವಾರ, 12 ಅಕ್ಟೋಬರ್ 2024 (13:14 IST)
ಮೈಸೂರು: ದಸರಾ ಹಬ್ಬದ ಪ್ರಯುಕ್ತ ಸಿಎಂ ಸಿದ್ದರಾಮಯ್ಯ ಕುಟುಂಬಸ್ಥರು ಇಂದು ಚಾಮುಂಡಿ ತಾಯಿಗೆ ಪೂಜೆ ಸಲ್ಲಿಸಿದ್ದಾರೆ. ಆದರೆ ಸಿದ್ದರಾಮಯ್ಯ ಪತ್ನಿ ಮಾತ್ರ ಕಾರಿನಲ್ಲಿ ಕುಳಿತೇ ಚಾಮುಂಡಿ ತಾಯಿಗೆ ನಮಿಸಿದರು.

ಸಿಎಂ ಸಿದ್ದರಾಮಯ್ಯ ಪತ್ನಿ ಎಲ್ಲೂ ಸಾರ್ವಜನಿಕವಾಗಿ ಕಾಣಿಸಿಕೊಳ್ಳುವುದಿಲ್ಲ. ಇತ್ತೀಚೆಗೆ ಮುಡಾ ಹಗರಣದಲ್ಲಿ ಸಿಎಂ ಪತ್ನಿ ಪಾರ್ವತಿ ಹೆಸರು ಜೋರಾಗಿ ಕೇಳಿಬಂದಿತ್ತು. ಬಹುಶಃ ಇದೇ ಕಾರಣಕ್ಕೋ ಏನೋ ಅವರು ಇಂದೂ ಕೂಡಾ ಮಾಧ್ಯಮಗಳ ಕಣ್ಣಿಗೆ ಬೀಳಲು ಇಚ್ಛಿಸಲಿಲ್ಲ.

ಈ ಕಾರಣಕ್ಕೆ ಪಾರ್ವತಿ ಸಿದ್ದರಾಮಯ್ಯ ಚಾಮುಂಡಿ ಸನ್ನಿಧಾನಕ್ಕೆ ಬಂದರೂ ಕಾರಿನಿಂದ ಇಳಿಯದೇ ಕಾರಿನಲ್ಲೇ ಕೂತು ತಾಯಿಗೆ ನಮಿಸಿದರು. ಆದರೆ  ಸಿದ್ದರಾಮಯ್ಯ ಸೊಸೆ ಸ್ಮಿತಾ ರಾಕೇಶ್ ಉತ್ಸವ ಮೂರ್ತಿ ಬಳಿ ಬಂದು ಪೂಜೆ ಸಲ್ಲಿಸಿದರು. ಇಂದು ಜಂಬೂ ಸವಾರಿ ನಡೆಯಲಿದೆ.

ಇಂದಿನ ವಿಶ್ವ ವಿಖ್ಯಾತ ಜಂಬೂ ಸವಾರಿಯಲ್ಲಿ ತಾವು ಪಾಲ್ಗೊಳ್ಳುವುದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಇಂದು ಮಧ್ಯಾಹ್ನ ಆರಂಭವಾಗುವ ಜಂಬೂ ಸವಾರಿ ಸಂಜೆ ಕೊನೆಯಾಗಲಿದೆ. ನಿನ್ನೆ ಸಿದ್ದರಾಮಯ್ಯ ಮೈಸೂರಿಗೆ ಬಂದು ದೀಪಾಲಂಕಾರವನ್ನು ತೆರೆದ ಬಸ್ ನಲ್ಲಿ ಸಂಚರಿಸಿ ಸಂಭ್ರಮಪಟ್ಟಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಾಸ್ಕ್‌ಮ್ಯಾನ್‌ ಬಂಧನ, ಸುಜಾತಾ ತಪ್ಪೊಪ್ಪಿಗೆ, ವೀರೇಂದ್ರ ಹೆಗ್ಗಡೆ ಮೊದಲ ಪ್ರತಿಕ್ರಿಯೆ

ಮಾಸ್ಕ್ ಮ್ಯಾನ್ ಚಿನಯ್ಯ ಸಿಕ್ಕಿಬಿದ್ದಿದ್ದು ಹೇಗೆ, ಪ್ರಣಬ್ ಮೊಹಂತಿ ಎದುರು ಏನಾಗಿತ್ತು ನೋಡಿ

ಧರ್ಮಸ್ಥಳ ಬುರುಡೆ ರಹಸ್ಯ: ಮಾಸ್ಕ್‌ಮ್ಯಾನ್ ಚಿನ್ನಯ್ಯ ಎಸ್‌ಐಟಿ ಕಸ್ಟಡಿಗೆ

ಧರ್ಮಸ್ಥಳದ ಷಡ್ಯಂತ್ರ ಹಿಂದೆ ಯಾರಿದ್ದಾರೆ ಎಂದು ತನಿಖೆಯಾಗಬೇಕು: ಬಿವೈ ವಿಜಯೇಂದ್ರ

ಕಾಂಗ್ರೆಸ್ ಶಾಸಕ ವೀರೇಂದ್ರ ಪಪಿ ಮನೆಯಲ್ಲಿ ಕಂತೆ ಕಂತೆ ಹಣ: ಅರೆಸ್ಟ್

ಮುಂದಿನ ಸುದ್ದಿ
Show comments