Publish Date: Fri, 02 Jun 2017 (14:17 IST)
Updated Date: Fri, 02 Jun 2017 (14:19 IST)
ಕಾಂಗ್ರೆಸ್ ಪಕ್ಷವನ್ನು ಮುಗಿಸೋದೆ ನಾನು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.ಅದರಂತೆ ಕಾಂಗ್ರೆಸ್ ಪಕ್ಷಕ್ಕೆ ಸಿದ್ದರಾಮಯ್ಯನವರೇ ಗತಿ ಕಾಣಿಸುತ್ತಾರೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷದವರಿಗೆ ಎಲ್ಲವು ಕಳೆದುಕೊಳ್ಳುತ್ತಿದ್ದೇವೆ ಎಂದು ಅನಿಸುತ್ತಿದೆ. ಆದ್ದರಿಂದ ಅವಿಶ್ವಾಸ ನಿರ್ಣಯ ಮಂಡಿಸಿದ್ದಾರೆ. ವಿಧಾನಪರಿಷತ್ ಸದಸ್ಯ ವಿ.ಎಸ್.ಉಗ್ರಪ್ಪ ಅವಿಶ್ವಾಸ ನಿರ್ಣಯ ಮಂಡಿಸಿರುವುದು ರಾಜಕೀಯ ಸಂಚು ಎಂದು ಗುಡುಗಿದ್ದಾರೆ.
ದೇಶದ ಎಲ್ಲಾ ರಾಜ್ಯಗಳಲ್ಲಿ ಕಾಂಗ್ರೆಸ್ ಅಳಿಸಿ ಹೋಗುತ್ತಿದೆ. ಕರ್ನಾಟಕ ರಾಜ್ಯದಲ್ಲಿ ಕೂಡಾ ಕಾಂಗ್ರೆಸ್ ಪಕ್ಷ ಮುಂದಿನ ಚುನಾವಣೆಯಲ್ಲಿ ಅಳಿಸಿಹೋಗಲಿದೆ ಎಂದು ಭವಿಷ್ಯ ನುಡಿದರು.
ಕಾಂಗ್ರೆಸ್ ಪಕ್ಷದ ಮುಖಂಡ ವಿ.ಎಸ್.ಉಗ್ರಪ್ಪ ವಿಧಾನಪರಿಷತ್ ಸಭಾಪತಿ ಡಿ.ಎಚ್.ಶಂಕರ್ ಮೂರ್ತಿ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದ್ದಾರೆ. 15 ದಿನಗಳೊಳಗೆ ಅವಿಶ್ವಾಸ ನಿರ್ಣಯ ಮಂಡನೆ ಚರ್ಚೆಗೆ ಬರಲಿದೆ ಎಂದು ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.