Select Your Language

Notifications

webdunia
webdunia
webdunia
webdunia

ನಮ್ಮ ಹೋರಾಟದ ಫಲವಾಗಿ ಸಿದ್ದರಾಮಯ್ಯ ಮನೆಗೆ ಹೋಗ್ತಾರೆ: ಬಿ ವೈ ವಿಜಯೇಂದ್ರ

BY Vijayendra Padayatra

Krishnaveni K

ಬೆಂಗಳೂರು , ಗುರುವಾರ, 8 ಆಗಸ್ಟ್ 2024 (14:16 IST)
ಬೆಂಗಳೂರು: ನಮ್ಮ ಹೋರಾಟದ ಪರಿಣಾಮವಾಗಿ ಸಿದ್ದರಾಮಯ್ಯನವರು ಮನೆಗೆ ಹೋಗಬೇಕಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ವಿಶ್ವಾಸ ವ್ಯಕ್ತಪಡಿಸಿದರು.
 
ಇಂದು ಮೈಸೂರು ಚಲೋ ಪಾದಯಾತ್ರೆಯು ಮುಂದುವರೆಯಿತು. ಈ ಸಂದರ್ಭದಲ್ಲಿ ಅವರು ಮಾಧ್ಯಮವೊಂದರ ಪ್ರತಿನಿಧಿ ಜೊತೆ ಮಾತನಾಡಿದರು. ಕಾಂಗ್ರೆಸ್ ಪಕ್ಷದ ಅಗ್ರಗಣ್ಯ ನಾಯಕರೂ ಸಿದ್ದರಾಮಯ್ಯನವರ ರಾಜೀನಾಮೆ ಪಡೆಯುವ ಉತ್ಸಾಹದಲ್ಲಿದ್ದಾರೆ ಎಂದು ಅವರು ಪ್ರಶ್ನೆಗೆ ಉತ್ತರ ಕೊಟ್ಟರು.

ಮೈಸೂರು ಚಲೋ ಬೃಹತ್ ಪಾದಯಾತ್ರೆಯು ಆರನೇ ದಿನಕ್ಕೆ ಕಾಲಿಟ್ಟಿದೆ. ಪಾದಯಾತ್ರೆಯೆಂಬ ಜನಾಂದೋಲನದಿಂದ ಸಿದ್ದರಾಮಯ್ಯನವರು ಕುರ್ಚಿ ಖಾಲಿ ಮಾಡಬೇಕಾಗುತ್ತದೆ. ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡಬೇಕಾಗುತ್ತದೆ ಎಂದು ನುಡಿದರು.

ಪೊಳ್ಳು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರಕಾರದ ವಿರುದ್ಧ ಜನಾಕ್ರೋಶ ವ್ಯಕ್ತವಾಗುತ್ತಿದೆ. ಅವರ ಭರವಸೆಗಳೆಲ್ಲ ಹುಸಿಯಾಗಿವೆ. ಜನರು ಸರಕಾರದ ಬಗ್ಗೆ ವಿಶ್ವಾಸವನ್ನು ಕಳಕೊಂಡಿದ್ದಾರೆ. ಭ್ರಷ್ಟಾಚಾರದಲ್ಲಿ ಮುಳುಗಿದ ಕಾಂಗ್ರೆಸ್ ಸರಕಾರಕ್ಕೆ ತಕ್ಕ ಪಾಠ ಕಲಿಸುವ ನಿರ್ಧಾರಕ್ಕೆ ರಾಜ್ಯದ ಜನತೆ ಬಂದಿದ್ದಾರೆ ಎಂದು ತಿಳಿಸಿದರು.
 
ಮುಖ್ಯಮಂತ್ರಿಗಳೇನು ಮುಚ್ಚಿಟ್ಟಿದ್ದಾರೋ
ಮೈಸೂರಿನ ಕಾಂಗ್ರೆಸ್ ಜನಾಂದೋಲನದಲ್ಲಿ ಬಿಜೆಪಿಯವರೆಲ್ಲರ ಬಗ್ಗೆ ಬಿಚ್ಚಿಡುವುದಾಗಿ ಮುಖ್ಯಮಂತ್ರಿಗಳು ಹೇಳಿದ ಕುರಿತು ಕೇಳಿದಾಗ, ‘ಮುಖ್ಯಮಂತ್ರಿಗಳೇನು ಮುಚ್ಚಿಟ್ಟಿದ್ದಾರೋ ಅದನ್ನು ಮೊದಲು ಬಿಚ್ಚಿಡಲಿ’ ಎಂದು ವಿಜಯೇಂದ್ರ ಅವರು ಉತ್ತರ ಕೊಟ್ಟರು.
 
ಮೈಸೂರು ಮುಡಾ ಪ್ರಕರಣದಲ್ಲಿ ಸಾವಿರಾರು ಕೋಟಿ ಬೆಲೆಬಾಳುವ ನಿವೇಶನಗಳನ್ನು ಲೂಟಿ ಮಾಡಿದ ಇವರ ಸರಕಾರವು ರಾಜ್ಯದ ಜನರಿಗೆ ಸತ್ಯವನ್ನು ಬಿಚ್ಚಿಡಲಿ ಎಂದು ಆಗ್ರಹಿಸಿದರು. ವಾಲ್ಮೀಕಿ ನಿಗಮದ ಹಗರಣದಲ್ಲಿ ಮುಖ್ಯಮಂತ್ರಿಗಳ ಪಾಲೇನಿದೆ, ಪಾತ್ರ ಏನು, ಎಷ್ಟು ಪಾಲು ಹೈಕಮಾಂಡಿಗೆ, ರಾಹುಲ್ ಅವರ ಕುಟುಂಬಕ್ಕೆ ಹೋಗಿದೆ ಎಂದು ಬಿಚ್ಚಿಡಲಿ. ಆಮೇಲೆ ನಮ್ಮದರ ಬಗ್ಗೆ ಚಿಂತನೆ ಮಾಡಲಿ ಎಂದು ಸವಾಲು ಹಾಕಿದರು.
 

Share this Story:

Follow Webdunia kannada

ಮುಂದಿನ ಸುದ್ದಿ

ಬಾಡಿಗೆ ಮನೆ ಬದಲಾಯಿಸಿದರೂ ಗೃಹಜ್ಯೋತಿ ಉಚಿತ ವಿದ್ಯುತ್ ಪಡೆಯುವುದು ಹೇಗೆ ಇಲ್ಲಿ ನೋಡಿ