Select Your Language

Notifications

webdunia
webdunia
webdunia
webdunia

ಲಂಚ ಪಡೆದಿದ್ದು ನಿಜವಾದ್ರೆ ರಾಜಕೀಯ ನಿವೃತ್ತಿಯಾಗ್ತೇನೆ- ಸಿಎಂ ಸಿದ್ದರಾಮಯ್ಯ

ಲಂಚ ಪಡೆದಿದ್ದು ನಿಜವಾದ್ರೆ ರಾಜಕೀಯ ನಿವೃತ್ತಿಯಾಗ್ತೇನೆ- ಸಿಎಂ ಸಿದ್ದರಾಮಯ್ಯ

geetha

bangalore , ಸೋಮವಾರ, 4 ಮಾರ್ಚ್ 2024 (18:39 IST)
ಬೆಂಗಳೂರು: ಸೋಮವಾರ ಅರಮನೆ ಮೈದಾನದಲ್ಲಿ ನಡೆದ ಗುತ್ತಿಗೆದಾರರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಎಷ್ಟೇ ಅಸಹಕಾರ ಕೊಟ್ಟರೂ ಗುತ್ತಿಗೆದಾರರ ಅಷ್ಟೂ ಹಣವನ್ನು ನಾವೇ ಹಂತ ಹಂತವಾಗಿ ಪಾವತಿಸುತ್ತೇವೆ ಎಂದರು.ನನ್ನ ಆಡಳಿತದ ಮೊದಲನೇ  ಅವಧಿಯಲ್ಲಾಗಲೀ ಅಥವಾ ಎರಡನೇ ಅವಧಿಯಲ್ಲಾಗಲೀ ಗುತ್ತಿಗೆ ಧೃಢೀಕರಣ ಪತ್ರ ನೀಡಲು ಐದು ಪೈಸೆ ಲಂಚ ಯಾರಾದರೂ ನನಗೆ ಕೊಟ್ಟಿದ್ದು ಸಾಬೀತಾದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು  ಸಿ.ಎಂ ಸಿದ್ದರಾಮಯ್ಯ  ಸವಾಲು ಹಾಕಿದ್ದಾರೆ. 
 
ಸಣ್ಣ ಗುತ್ತಿಗೆದಾರರ ಅನುಕೂಲಕ್ಕಾಗಿ 4 ಸಾವಿರ ಕೋಟಿ ರೂಪಾಯಿಯ ಕಾಮಗಾರಿಯನ್ನು ಪ್ಯಾಕೇಜ್ ಇಲ್ಲದೆ ನೀಡಲು ಲೋಕೋಪಯೋಗಿ ಸಚಿವರಿಗೆ ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಪ್ಯಾಕೇಜ್ ಪದ್ದತಿ ರದ್ದುಗೊಳಿಸುವುದು, ಬಾಕಿ ಮೊತ್ತವನ್ನು ಪಾವತಿಸುವುದು ಸೇರಿದಂತೆ ಗುತ್ತಿಗೆದಾರರು ಮುಂದಿಟ್ಟ ಎಲ್ಲಾ ಬೇಡಿಕೆಗಳ ಕುರಿತು  ಸಕಾರಾತ್ಮಕವಾಗಿ ಪ್ರತಿಕ್ರಿಯಿಸುವುದಾಗಿ ತಿಳಿಸಿದ ಸಿಎಂ, ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ನೀಡುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಆಗಿನ ಸಿಎಂ ಬಸವರಾಜ ಬೊಮ್ಮಾಯಿ ಇಬ್ಬರೂ ಬಜೆಟ್ ನಲ್ಲೇ ಘೋಷಿಸಿದರು.

ಆದರೆ ಇವತ್ತಿನವರೆಗೂ ಒಂದೇ ಒಂದು ರೂಪಾಯಿ ಕೊಟ್ಟಿಲ್ಲ ಎಂದು ಟೀಕಿಸಿದರು.ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಸತೀಶ್ ಜಾರಕಿಹೊಳಿ, ಬೋಸ್ ರಾಜು, ಜಮೀರ್ ಅಹಮದ್ ಖಾನ್ ಸೇರಿ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಕೆಂಪಣ್ಣ ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.
 

Share this Story:

Follow Webdunia kannada

ಮುಂದಿನ ಸುದ್ದಿ

ನಾನು ಕುಟುಂಬಸ್ಥ ಎಂದ ನರೇಂದ್ರ ಮೋದಿ