Select Your Language

Notifications

webdunia
webdunia
webdunia
webdunia

ದುಷ್ಟರ ಸಂಹಾರ, ಶಿಷ್ಟರ ರಕ್ಷಣೆಯೇ ದಸರಾದ ಸಂಕೇತ: ಮುಖ್ಯಮಂತ್ರಿ ಸಿದ್ದರಾಮಯ್ಯ

Siddaramaiah

Krishnaveni K

ಮೈಸೂರು , ಶನಿವಾರ, 12 ಅಕ್ಟೋಬರ್ 2024 (12:50 IST)
ಮೈಸೂರು: ದುಷ್ಟರ ಸಂಹಾರ, ಶಿಷ್ಟರ ರಕ್ಷಣೆಯೇ ದಸರಾದ ಸಂಕೇತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನ ಸುತ್ತೂರು ಮಠದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
 
ವಿಜಯದಶಮಿ, ದಸರಾ ಉತ್ಸವದ ಕೊನೆಯ ದಿನವಾಗಿದ್ದು, ಜಂಬೂಸವಾರಿ ನಡೆಯಲಿದ್ದು, ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ನಡೆಯಲಿದೆ. ಈ ಶುಭ ಸಂದರ್ಭದಲ್ಲಿ ನಾಡಿನ ಹಾಗೂ ದೇಶದ ಜನರಿಗೆ ದಸರಾ ಉತ್ಸವದ ಶುಭಾಶಯಗಳನ್ನು ಕೋರುತ್ತೇನೆ. ಈ ಬಾರಿನಲ್ಲಿ ಉತ್ತಮ ಮಳೆ ಹಾಗೂ ಬೆಳೆಯಾಗಿದ್ದು, ನಾಡಿನ ರೈತರಲ್ಲಿ ಸಂತಸ ಮನೆಮಾಡಿದೆ. ರಾಜ್ಯದ  ಎಲ್ಲಾ ಜಲಾಶಯಗಳು ತುಂಬಿರುವುದು ಸಂತಸದ ವಿಚಾರ.  ದುಷ್ಟರ ಸಂಹಾರ, ಶಿಷ್ಟರ ರಕ್ಷಣೆಯೇ ದಸರಾದ ಸಂಕೇತ. ರಾಜ್ಯದಲ್ಲಿ ಅಶಾಂತಿ ಮೂಡಿಸಿ, ಬದುಕುಗಳನ್ನು ಹಾಳುಮಾಡಲು ಸಂಚು ರೂಪಿಸುವವರಿಗೆ ದೇವರು ಸದ್ಭುದ್ಧಿ ನೀಡಲಿ ಎಂದು ತಿಳಿಸಿದರು.

ಇದಕ್ಕೆ ಮೊದಲು ಟ್ವೀಟ್ ಮೂಲಕವೂ ಅವರು ಜನತೆಗೆ ದಸರಾ ವಿಜಯದಶಮಿ ದಿನದ ಶುಭಾಶಯ ಕೋರಿದ್ದರು. ದಸರಾ ಹಬ್ಬದ ಪ್ರಯುಕ್ತ ನಿನ್ನೆ ಸಿದ್ದರಾಮಯ್ಯ ಮೈಸೂರಿಗೆ ತೆರಳಿ ದಸರಾ ದೀಪಾಲಂಕಾರವನ್ನು ತೆರೆದ ಬಸ್ ನಲ್ಲಿ ಸಂಚರಿಸಿ ವೀಕ್ಷಣೆ ಮಾಡಿದ್ದಾರೆ.
 

Share this Story:

Follow Webdunia kannada

ಮುಂದಿನ ಸುದ್ದಿ

ದಸರಾ ಶುಭಾಶಯದಲ್ಲೂ ನಿಮ್ಮ ದರಿದ್ರ ರಾಜಕೀಯ ಬಿಡಲ್ವಲ್ಲಾ: ಸಿದ್ದರಾಮಯ್ಯ ಸಂದೇಶಕ್ಕೆ ನೆಟ್ಟಿಗರ ತರಾಟೆ