Publish Date: Mon, 12 Mar 2018 (12:28 IST)
Updated Date: Mon, 12 Mar 2018 (12:31 IST)
ಬೆಂಗಳೂರು: ಐಪಿಎಸ್ ಅಧಿಕಾರಿಗಳ ವಿರುದ್ಧ ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದಾರೆ. ಅದಕ್ಕೆ ಕಾರಣ ರಾಜ್ಯ ಸರ್ಕಾರದ ವಿರುದ್ಧ ಮುಖ್ಯ ಕಾರ್ಯದರ್ಶಿಗೆ ಐಪಿಎಸ್ ಸಂಘದ ಅಧಿಕಾರಿಗಳು ಪತ್ರ ಬರೆದಿರುವುದು.
ರಾಜ್ಯದಲ್ಲಿ ಐಪಿಎಸ್ ಅಧಿಕಾರಿಗಳು ಕರ್ತವ್ಯ ನಿರ್ವಹಿಸುವ ವಾತಾವರಣ ಸದ್ಯಕ್ಕಿಲ್ಲ ಎಂದು ಐಪಿಎಸ್ ಸಂಘದ ಮುಖ್ಯಸ್ಥ ಆರ್ ಪಿ ಶರ್ಮಾ ಬರೆದಿದ್ದಾರೆನ್ನಲಾದ ಪತ್ರ ಇದೀಗ ಸಿಎಂ ಪಿತ್ಥ ನೆತ್ತಿಗೇರಿಸಿದೆ. ಡಿಜಿಪಿ ನೀಲಮಣಿ ರಾಜು ಅವರಿಗೆ ಪತ್ರ ಬರೆದ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಲು ಸಿಎಂ ಸೂಚಿಸಿದ್ದಾರೆ. ನಿಮ್ಮ ಸಮಸ್ಯೆಗಳನ್ನು ಹೇಳುವ ರೀತಿ ಇದಲ್ಲ ಎಂದು ಅವರು ಕಿಡಿ ಕಾರಿದ್ದಾರೆ ಎನ್ನಲಾಗಿದೆ.
ಈ ನಡುವೆ ಇದೇ ವಿಚಾರವಾಗಿ ಬಿಜೆಪಿ ನಾಯಕ ಜಗದೀಶ್ ಶೆಟ್ಟರ್ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಇದು ಸಿದ್ದರಾಮಯ್ಯ ಆಡಳಿತದಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುವ ಅಧಿಕಾರಿಗಳಿಗೆ ಬೆಲೆ ಇಲ್ಲ ಎಂದು ಟೀಕಾಪ್ರಹಾರ ನಡೆಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ