Publish Date: Sat, 04 Nov 2017 (09:21 IST)
Updated Date: Sat, 04 Nov 2017 (09:24 IST)
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ನಾವು ಏನೇ ಹೇಳಿದರೂ ಕೇಳುವುದಿಲ್ಲ. ಅವರಿಗೆ ಜನರೇ ಬುದ್ಧಿ ಕಲಿಸಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
‘ಯಡಿಯೂರಪ್ಪ ರ್ಯಾಲಿ ನಡೆಸಿದಷ್ಟೂ ನಮಗೆ ಉಪಯೋಗವಾಗಲಿದೆ ಎಂದಿರುವ ಸಿಎಂ ಸಿದ್ದರಾಮಯ್ಯ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ವಿರುದ್ಧವೂ ವಾಗ್ದಾಳಿ ನಡೆಸಿದ್ದಾರೆ.
ಕೇಂದ್ರದ ಅನುದಾನವನ್ನು ರಾಜ್ಯ ಸರ್ಕಾರ ದುರುಪಯೋಗ ಪಡಿಸಿಕೊಂಡಿದೆ ಎಂಬ ಅಮಿತ್ ಶಾ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು ‘ವಿಧಾನಸಭೆಯಲ್ಲಿ ಪ್ರತಿಪಕ್ಷ ನಾಯಕನ ಸ್ಥಾನದಲ್ಲಿ ಜಗದೀಶ್ ಶೆಟ್ಟರ್ ಇದ್ದಾರೆ. ಅವರು ಪ್ರಶ್ನೆ ಕೇಳಲಿ. ಉತ್ತರಿಸುತ್ತೇನೆ’ ಎಂದಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ