Publish Date: Mon, 19 Mar 2018 (09:45 IST)
Updated Date: Mon, 19 Mar 2018 (09:47 IST)
ಬೆಂಗಳೂರು: ಇಂದು ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದ್ದು ಲಿಂಗಾಯತ ಪ್ರತ್ಯೇಕ ಧರ್ಮದ ಕುರಿತು ಚರ್ಚೆ ನಡೆಯಲಿದೆ.
ನ್ಯಾ. ಮೋಹನ್ ದಾಸ್ ಸಲ್ಲಿಸಿರುವ ಲಿಂಗಾಯತ ಪ್ರತ್ಯೇಕ ಧರ್ಮ ಪ್ರಸ್ತಾವನೆಯನ್ನು ಕೇಂದ್ರಕ್ಕೆ ಕಳುಹಿಸಬೇಕೋ ಬೇಡವೋ ಎಂಬ ಬಗ್ಗೆ ಇಂದು ಚರ್ಚೆ ನಡೆಯಲಿದೆ.
ಈ ಸಭೆ ಕಳೆದ ವಾರವೇ ನಿಗದಿಯಾಗಿತ್ತು. ಆದರೆ ಗೊಂದಲಗಳ ಹಿನ್ನಲೆಯಲ್ಲಿ ಅನಾರೋಗ್ಯದ ನೆಪವೊಡ್ಡಿ ಸಿಎಂ ಸಭೆ ಮುಂದೂಡಿದ್ದರು. ಇಂದು ಸಚಿವ ಸಂಪುಟ ಸಭೆಯಲ್ಲಿ ವರದಿಗೆ ಅನುಮೋದನೆ ಸಿಕ್ಕಿದರೆ ಪ್ರಸ್ತಾವನೆ ಕೇಂದ್ರಕ್ಕೆ ಸಲ್ಲಿಕೆಯಾಗಲಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ