Select Your Language

Notifications

webdunia
webdunia
webdunia
webdunia

ರಾಹುಲ್ ಗಾಂಧಿ ಸಭೆಗೆ ತಡವಾಗಿ ಆಗಮಿಸಿದ ಸಿಎಂ ಸಿದ್ದರಾಮಯ್ಯ

ರಾಹುಲ್ ಗಾಂಧಿ ಸಭೆಗೆ ತಡವಾಗಿ ಆಗಮಿಸಿದ ಸಿಎಂ ಸಿದ್ದರಾಮಯ್ಯ
ಮೈಸೂರು , ಭಾನುವಾರ, 25 ಮಾರ್ಚ್ 2018 (10:24 IST)
ಮೈಸೂರು: ಮೈಸೂರು ಜಿಲ್ಲೆ ಪ್ರವಾಸದಲ್ಲಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸರ್ಕಾರಿ ಅತಿಥಿ ಗೃಹದಲ್ಲಿ ವಾಸ್ತವ್ಯ ಹೂಡಿದ್ದು, ಪಕ್ಷದ ನಾಯಕರೊಂದಿಗೆ ಸಭೆ ನಡೆಸಿದ್ದಾರೆ.
 

ಸರ್ಕಾರಿ ಅತಿಥಿ ಗೃಹದಲ್ಲಿ ನಡೆದ ಸಭೆಗೆ ಲೋಕಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಡಾ. ಎಚ್ ಸಿ ಮಹದೇವಪ್ಪ ಸೇರಿದಂತೆ ಕಾಂಗ್ರೆಸ್ ಪಕ್ಷದ ಜಿಲ್ಲಾ ನಾಯಕರು, ಬ್ಲಾಕ್ ಪಂಚಾಯತ್ ನಾಯಕರು ಆಗಮಿಸಿದ್ದಾರೆ.

ಇವರ ಜತೆಗೆ ರಾಹುಲ್ ಮುಂಬರುವ ಚುನಾವಣೆಗೆ ನಡೆಸಬೇಕಾದ ಸಿದ್ಧತೆಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಆದರೆ ಸಿಎಂ ಸಿದ್ದರಾಮಯ್ಯ ತಡವಾಗಿ ಸಭೆಗೆ ಆಗಮಿಸಿದ್ದಾರೆ. ತಮ್ಮ ತವರು ಜಿಲ್ಲೆಯಲ್ಲಿರುವ ಪಕ್ಷದ ಅಧ್ಯಕ್ಷರ ಭೇಟಿಗೆ ಸಿದ್ದರಾಮಯ್ಯ ಕೊಂಚ ತಡವಾಗಿ ಆಗಮಿಸಿ ಚುನಾವಣೆ ರಣತಂತ್ರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ರಾಹುಲ್ ಗಾಂಧಿ ಭಾಷಣಕ್ಕೆ ಮೂಲ ಕಾಂಗ್ರೆಸ್ಸಿಗರ ಮುನಿಸು