Publish Date: Tue, 24 Apr 2018 (09:48 IST)
Updated Date: Tue, 24 Apr 2018 (16:25 IST)
ಮೈಸೂರು: ವರುಣಾ ಕ್ಷೇತ್ರದಲ್ಲಿ ತಮ್ಮ ಪುತ್ರ ಡಾ. ಯತೀಂದ್ರ ವಿರುದ್ಧ ಯಾರೇ ನಿಂತರೂ ಅವರಿಗೆ ಸೋಲು ಗ್ಯಾರಂಟಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೊಂಡಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಬಿಎಸ್ ವೈ ಪುತ್ರ ಬಿವೈ ವಿಜಯೇಂದ್ರ ಸ್ಪರ್ಧೆ ಬಗ್ಗೆ ಈ ರೀತಿ ಪ್ರತಿಕ್ರಿಯೆ ನೀಡಿದ್ದಾರೆ.
ಇನ್ನು ಬಾದಾಮಿ ಕ್ಷೇತ್ರದಲ್ಲಿ ತಮ್ಮ ವಿರುದ್ಧ ಶ್ರೀರಾಮುಲು ಕಣಕ್ಕಿಳಿಯುತ್ತಿರುವುದರ ಬಗ್ಗೆಯೂ ಲೇವಡಿ ಮಾಡಿರುವ ಅವರು ‘ಯಾರ್ರೀ ಅದು ಶ್ರೀರಾಮುಲು? ಎಷ್ಟು ವರ್ಷ ಚುನಾವಣೆಯ ಅನುಭವ ಅವರಿಗಿದೆ?’ ಎಂದು ಪ್ರಶ್ನಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.