Publish Date: Mon, 09 Oct 2017 (11:09 IST)
Updated Date: Mon, 09 Oct 2017 (11:12 IST)
ಬೆಂಗಳೂರು: ಹೈಕಮಾಂಡ್ ಗೆ ಕಪ್ಪ ನೀಡಿರುವ ಕುರಿತು ಕಾರ್ಯಕ್ರಮವೊಂದರಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಮತ್ತು ಕೇಂದ್ರ ಸಚಿವ ಅನಂತಕುಮಾರ್ ಅವರ ನಡುವೆ ನಡೆದಿತ್ತು ಎನ್ನಲಾದ ಮಾತುಕತೆಯ ವಿಡಿಯೋ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ.
ಸಿಡಿಯಲ್ಲಿರುವುದು ಬಿಎಸ್ ವೈ ಮತ್ತು ಅನಂತ ಕುಮಾರ್ ರದ್ದೇ ಧ್ವನಿ ಎಂದು ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿ ಸಾಬೀತಾಗಿರುವುದರಿಂದ ಉಭಯ ನಾಯಕರ ವಿರುದ್ಧ ಎಫ್ ಐಆರ್ ದಾಖಲಿಸುವುದು ಮತ್ತು ಪ್ರಕರಣವನ್ನು ಎಸಿಬಿ ಸುಪರ್ದಿಗೆ ಒಪ್ಪಿಸುವ ಬಗ್ಗೆ ಸಿಎಂ ಸಿದ್ದರಾಮಯ್ಯ ಪೊಲೀಸ್ ಆಯುಕ್ತರೊಂದಿಗೆ ಚರ್ಚೆ ನಡೆಸಿದ್ದಾರೆ.
ಫೆ.12 ರಂದು ನಡೆದ ಕಾರ್ಯಕ್ರಮದಲ್ಲಿ ಬಿಎಸ್ ವೈ-ಅನಂತ ಕುಮಾರ್ ಅಕ್ಕಪಕ್ಕ ಕುಳಿತುಕೊಂಡು ಕಪ್ಪದ ಬಗ್ಗೆ ಮಾತನಾಡುತ್ತಿದ್ದುದು, ಟಿವಿ ಕ್ಯಾಮರಾದಲ್ಲಿ ಸೆರೆಯಾಗಿತ್ತು. ಆಗ ಕಾಂಗ್ರೆಸ್ ಹೈಕಮಾಂಡ್ ಗೆ ಕಪ್ಪ ನೀಡಿರುವ ವಿಚಾರದಲ್ಲಿ ಬಿಜೆಪಿ ರಾಜ್ಯ ಕಾಂಗ್ರೆಸ್ ನಾಯಕರನ್ನು ಟೀಕಿಸುತ್ತಿದ್ದರು. ಆದರೆ ಈ ವಿಡಿಯೋ ಕಾಂಗ್ರೆಸ್ ಗೆ ಸಿಕ್ಕ ಬಹುದೊಡ್ಡ ಅಸ್ತ್ರವಾಗಿತ್ತು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ