Publish Date: Thu, 10 May 2018 (09:42 IST)
Updated Date: Thu, 10 May 2018 (09:43 IST)
ಬೆಂಗಳೂರು: ಸ್ವ ಕ್ಷೇತ್ರ ಚಾಮುಂಡೇಶ್ವರಿಯಲ್ಲಿ ನಿನ್ನೆಯಿಂದ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದ ಸಿಎಂ ಸಿದ್ದರಾಮಯ್ಯ ದಿಡೀರ್ ಕಾರ್ಯಕ್ರಮ ರದ್ದುಗೊಳಿಸಿ ಬೆಂಗಳೂರಿನತ್ತ ಆಗಮಿಸುತ್ತಿದ್ದಾರೆ.
ಬೆಂಗಳೂರಿನಲ್ಲಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಇಂದು ಸುದ್ದಿಗೋಷ್ಠಿ ನಡೆಸಲಿದ್ದಾರೆ. ಈ ಹಿನ್ನಲೆಯಲ್ಲಿ ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿಗೆ ಹಾಜರಿರಬೇಕೆಂದು ಸೂಚನೆ ಬಂದ ಹಿನ್ನಲೆಯಲ್ಲಿ ತಮ್ಮ ಇಂದಿನ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದಾರೆ.
ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿಎಂ ಇಂದು 13 ಕಡೆ ರೋಡ್ ಶೋ ನಡೆಸಬೇಕಿತ್ತು. ಇದೀಗ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.