Publish Date: Thu, 19 Apr 2018 (07:13 IST)
Updated Date: Thu, 19 Apr 2018 (07:15 IST)
ಮೈಸೂರು: ಸಿಎಂ ಸಿದ್ದರಾಮಯ್ಯ ಎರಡು ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುತ್ತಾರೆ ಎಂಬ ವದಂತಿಗಳಿಗೆ ಇದೀಗ ಮತ್ತೆ ರೆಕ್ಕೆ ಪುಕ್ಕ ಬಂದಿದೆ.
ಮೊದಲ ಪಟ್ಟಿ ಬಿಡುಗಡೆ ಮಾಡುವಾಗ ಕಾಂಗ್ರೆಸ್ ಬಾದಾಮಿ ಕ್ಷೇತ್ರದ ಟಿಕೆಟ್ ಘೋಷಣೆ ಮಾಡಿರಲಿಲ್ಲ. ಇದೀಗ ಅಲ್ಲಿನ ಹಾಲಿ ಶಾಸಕ ಬಿಬಿ ಚಿಮ್ಮನಕಟ್ಟಿ ಬಿ ಫಾರಂ ಕೇಳಲು ಬಂದಾಗಿ ಸಿಎಂ ನಾನು ಸ್ಪರ್ಧೆ ಮಾಡಿದರೆ ನಿನಗೆ ಟಿಕೆಟ್ ಸಿಗಲ್ಲ ಎಂದಿದ್ದಾರೆ ಎನ್ನಲಾಗಿದೆ.
ಈ ಮೂಲಕ ಬಾದಾಮಿಯಲ್ಲಿ ಸ್ಪರ್ಧಿಸುವ ಬಗ್ಗೆ ಸುಳಿವು ನೀಡಿದ್ದಾರೆ. ಈ ಮೊದಲು ಸಿಎಂ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸುವ ಸುಳಿವು ಇತ್ತಾದರೂ ಅದಕ್ಕೆ ಕೆಪಿಸಿಸಿ ಅಧ್ಯಕ್ಷ ಜಿ ಪರಮೇಶ್ವರ್, ಮಲ್ಲಿಕಾರ್ಜುನ್ ಖರ್ಗೆ ವಿರೋಧವಿತ್ತು ಎನ್ನಲಾಗಿತ್ತು. ಆದರೆ ಸಿಎಂ ಇದೀಗ ಬಾದಾಮಿ ಶಾಸಕನ ಬಳಿ ಹೇಳಿರುವ ವಿಚಾರ ಮತ್ತಷ್ಟು ಕುತೂಹಲಕ್ಕೆ ಕಾರಣವಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.