Publish Date: Tue, 06 Mar 2018 (09:03 IST)
Updated Date: Tue, 06 Mar 2018 (09:05 IST)
ನವದೆಹಲಿ: ಕಾಂಗ್ರೆಸ್ ಹೈಕಮಾಂಡ್ ನಿಂದ ಬುಲಾವ್ ಬಂದ ಹಿನ್ನಲೆಯಲ್ಲಿ ಸಿಎಂ ಸಿದ್ದರಾಮಯ್ಯ ದೆಹಲಿಗೆ ಇಂದು ಬೆಳಿಗ್ಗೆ ವಿಮಾನವೇರಲಿದ್ದಾರೆ.
ರಾಜ್ಯ ಸಭೆ ಚುನಾವಣೆ ಹಿನ್ನಲೆಯಲ್ಲಿ ಅಭ್ಯರ್ಥಿಗಳ ಪಟ್ಟಿ ರೆಡಿ ಮಾಡುವ ನಿಟ್ಟಿನಲ್ಲಿ ಕೆಲವೇ ಕ್ಷಣಗಳಲ್ಲಿ ಸಿಎಂ ದೆಹಲಿಗೆ ತೆರಳಲಿದ್ದಾರೆ.
ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ಇತರ ಕಾಂಗ್ರೆಸ್ ನಾಯಕರೊಂದಿಗೆ ಚರ್ಚಿಸಲಿರುವ ಸಿಎಂ, ಮೂವರು ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಮಾರ್ಚ್ 24 ರಂದು ರಾಜ್ಯ ಸಭೆಯ 4 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ