Select Your Language

Notifications

webdunia
webdunia
webdunia
webdunia

ಪುತ್ರ ಯತೀಂದ್ರ ಪರ ಪರೋಕ್ಷವಾಗಿ ಈ ಸುಳಿವು ಬಿಟ್ಟುಕೊಟ್ಟ ಸಿಎಂ ಸಿದ್ದರಾಮಯ್ಯ!

ಸಿಎಂ ಸಿದ್ದರಾಮಯ್ಯ
ಮಂಡ್ಯ: ಸಿಎಂ ಸಿದ್ದರಾಮಯ್ಯ ಪುತ್ರ ಈ ಬಾರಿ ತಮ್ಮ ಪುತ್ರ ಯತೀಂದ್ರರನ್ನು ವರುಣಾ ಕ್ಷೇತ್ರದಲ್ಲಿ ಕಣಕ್ಕಿಳಿಸುತ್ತಾರೆ ಎಂಬ ಸುದ್ದಿಗೆ ಪುಷ್ಠಿ ಕೊಡುವಂತೆ ಹೇಳಿಕೆಯೊಂದನ್ನು ನೀಡಿದ್ದಾರೆ.
 

ಮೈಸೂರಿನಲ್ಲಿ ಸಾಧನಾ ಸಮಾವೇಶದಲ್ಲಿ ಪಾಲ್ಗೊಂಡ ಸಿಎಂ ಸಿದ್ದರಾಮಯ್ಯ, ತಾನು ಮುಂದಿನ ಚುನಾವಣೆಯಲ್ಲಿ ವರುಣಾ ಕ್ಷೇತ್ರದಲ್ಲಿ ಸ್ಪರ್ಧೆಗಿಳಿಯುತ್ತೇನೋ ಇಲ್ಲವೋ ಗೊತ್ತಿಲ್ಲ. ಆದರೆ ತಮ್ಮ ಬದಲಿಗೆ ನಿಲ್ಲುವ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸುವ ಜವಾಬ್ದಾರಿ ನಿಮ್ಮ ಮೇಲಿದೆ ಎಂದು ನಗು ನಗುತ್ತಲೇ ಹೇಳಿಕೊಂಡಿದ್ದಾರೆ.

ಆ ಮೂಲಕ ಪರೋಕ್ಷವಾಗಿ ವರುಣಾ ಕ್ಷೇತ್ರವನ್ನು ಪುತ್ರ ಯತೀಂದ್ರಗೆ ಬಿಟ್ಟುಕೊಡುತ್ತಿರುವ ಸೂಚನೆ ನೀಡಿದ್ದಾರೆ. ಈಗಾಗಲೇ ಸಿಎಂ ತಾವು ಈ ಬಾರಿ ಚಾಮುಂಡೇಶ್ವರಿ ಕ್ಷೇತ್ರದಲ್ಲೇ ಸ್ಪರ್ಧಿಸುವುದಾಗಿ ಖಚಿತಪಡಿಸಿರುವುದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ತಾಕತ್ತಿದ್ದರೆ ಆರ್‌ಎಸ್‌ಎಸ್‌, ಶ್ರೀರಾಮಸೇನೆ, ಬಜರಂಗದಳ ನಿಷೇಧಿಸಲಿ- ಮುತಾಲಿಕ್