Publish Date: Wed, 01 Nov 2017 (09:18 IST)
Updated Date: Wed, 01 Nov 2017 (09:25 IST)
ಬೆಂಗಳೂರು: ಕನ್ನಡ ರಾಜ್ಯೋತ್ಸವ ಪ್ರಯುಕ್ತ ಇಂದು ಬೆಳಿಗ್ಗೆ ಸಿಎಂ ಸಿದ್ದರಾಮಯ್ಯ ಕಂಠೀರವ ಸ್ಟೇಡಿಯಂನಲ್ಲಿ ನಡೆದ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿದರು.
ರೈತಗೀತೆ, ನಾಡಗೀತೆಯೊಂದಿಗೆ ಕಾರ್ಯಕ್ರಮ ಆರಂಭವಾಯಿತು. ಹಳದಿ, ಕೆಂಪು ಬಣ್ಣದ ನಾಡ ಧ್ವಜವನ್ನು ಆರೋಹಣ ಮಾಡಿದ ಸಿಎಂ ನಂತರ ಕೆಂಪು, ಹಳದಿ ಬಣ್ಣದ ಬಲೂನ್ ನ್ನು ಹಾರಿಬಿಡುವ ಮೂಲಕ ಸಾಂಕೇತಿಕವಾಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ 80 ಶಾಲೆಗಳ 2 ಸಾವಿರ ಮಕ್ಕಳು ಪಾಲ್ಗೊಂಡಿದ್ದಾರೆ. ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಂ, ಸದಾನಂದ ಗೌಡ, ಅನಂತ್ ಕುಮಾರ್ ಹಾಗೂ ರಾಜ್ಯ ಸರ್ಕಾರದ ಸಚಿವ ತನ್ವೀರ್ ಸೇಠ್, ರೋಷನ್ ಬೇಗ್ ಮುಂತಾದವರು ಪಾಲ್ಗೊಂಡಿದ್ದಾರೆ. ಶಾಲಾ ಮಕ್ಕಳ ಪಥ ಸಂಚಲನ ವಿಶೇಷ ಆಕರ್ಷಣೆಯಾಗಿತ್ತು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ