ಬೆಂಗಳೂರು: ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಹದಗೆಟ್ಟಿದೆ. ಹಿಂದೂಗಳಿಗೆ ಒಂದು, ಮುಸಲ್ಮಾನರಿಗೆ ಒಂದು ನ್ಯಾಯವಾಗಿದೆ. ಒಬ್ಬ ಹುಚ್ಚ ಸಿಎಂ ಕೈಯಲ್ಲಿ ಆಡಳಿತ ಕೊಟ್ಟ ಹಾಗಾಗಿದೆ ಎಂದು ಬಿಜೆಪಿ ನಾಯಕ ಕೆಎಸ್ ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.
‘ಸಿಎಂ ಸಿದ್ದರಾಮಯ್ಯ ಒಬ್ಬ ಹುಚ್ಚ. ಹುಚ್ಚರ ತರಾ ಮಾತಾಡ್ತಾರೆ. ಹಿಂದೂಗಳ ಹೆಣದ ಮೇಲೆ ರಾಜಕೀಯ ಮಾಡುತ್ತೀರಾ? ನೀವು ಸಿಎಂ ಆಗಿರುವುದು ಮುಸ್ಲಿಮರಿಗೆ ಮಾತ್ರವಲ್ಲ, ಹಿಂದೂಗಳಿಗೆ ಕೂಡಾ ಎನ್ನುವುದನ್ನು ಮರೆಯಬೇಡಿ’ ಎಂದು ಶಿವಮೊಗ್ಗದಲ್ಲಿ ಈಶ್ವರಪ್ಪ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು.
‘ಸಿಎಂ ಏನು ಮಾತನಾಡುತ್ತಿದ್ದಾರೆಂದು ಅವರಿಗೇ ಗೊತ್ತಿಲ್ಲ. ಅವರಿಗೆ ಉತ್ತರಿಸುವುದೂ ಇಲ್ಲ. ಹೀಗಾಗಿ ಅವರನ್ನು ಇಂದಿನಿಂದ ಹುಚ್ಚ ಎಂದು ಕರೆಯುತ್ತಿದ್ದೇನೆ’ ಎಂದು ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ