Webdunia - Bharat's app for daily news and videos

Install App

ಸಂವಿಧಾನ ಇಲ್ಲದೇ ಹೋಗಿದ್ದರೆ ನಾನು ಕುರಿ ಮೇಯಿಸ್ತಿದ್ದೆ ಎಂದ ಸಿಎಂ ಸಿದ್ದರಾಮಯ್ಯ!

Webdunia
ಭಾನುವಾರ, 15 ಏಪ್ರಿಲ್ 2018 (08:29 IST)
ಬೆಂಗಳೂರು: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಜನ್ಮ ಜಯಂತಿ ಪ್ರಯುಕ್ತ ಟ್ವಿಟರ್ ನಲ್ಲಿ ಸಂದೇಶ ಬರೆದಿರುವ ಸಿಎಂ ಸಿದ್ದರಾಮಯ್ಯ ಸಂವಿಧಾನ ಇಲ್ಲದೇ ಇದ್ದಿದ್ದರೆ ಕುರಿ ಮೇಯಿಸ್ತಿದ್ದೆ ಎಂದಿದ್ದಾರೆ.

ಬಾಬಾ ಸಾಹೇಬರು ರಚಿಸಿದ್ದ ಸಂವಿಧಾನ ಇಲ್ಲದೇ ಹೋಗಿದ್ದರೆ ನಾನು ಹಳ್ಳಿಯಲ್ಲಿ ದನ-ಕುರಿ ಮೇಯಿಸಿಕೊಂಡು ಉಳಿದು ಬಿಡುತ್ತಿದ್ದೆನೇನೋ? ನನ್ನಲ್ಲಿ ಸಾಮಾಜಿಕ ನ್ಯಾಯದ ಬದ್ಧತೆ, ಹೋರಾಟದ ಕಿಚ್ಚು ಮತ್ತು ಭವಿಷ್ಯದ ಬಗ್ಗೆ ಭರವಸೆ ಹುಟ್ಟಿಸಿದ್ದು ಅಂಬೇಡ್ಕರ್. ನನ್ನ ರಾಜಕೀಯ ಬದುಕು ಅಂಬೇಡ್ಕರ್ ಚಿಂತನೆಯ ಫಲ ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.

ಅಷ್ಟೇ ಅಲ್ಲ, ಅಂಬೇಡ್ಕರ್ ಬಗ್ಗೆ, ದಲಿತರ ಬಗ್ಗೆ ಪ್ರಧಾನಿ ಮೋದಿ ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಹೊಗಳಿದ ಹೇಳಿಕೆಯನ್ನು ಸಿಎಂ ಪರೋಕ್ಷವಾಗಿ ಟೀಕಿಸಿದ್ದಾರೆ. ಸಂವಿಧಾನವನ್ನೇ ಬದಲಿಸುವ ಮಾತನಾಡುವವರ ಬಾಯಲ್ಲಿ ಎಂತಹಾ ಮಾತು ಬರುತ್ತಿದೆ ಎಂದು ಸಿಎಂ ವ್ಯಂಗ್ಯವಾಗಿ ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments