Publish Date: Sat, 21 Apr 2018 (10:59 IST)
Updated Date: Sat, 21 Apr 2018 (11:01 IST)
ಮೈಸೂರು: ಸಿಎಂ ಸಿದ್ದರಾಮಯ್ಯ ಎರಡನೇ ಕ್ಷೇತ್ರವಾಗಿ ಬಾದಾಮಿಯಲ್ಲಿ ಸ್ಪರ್ಧೆ ಮಾಡುತ್ತಾರಾ ಎಂಬ ಪ್ರಶ್ನೆಗಳಿಗೆ ಇಂದು ಹೈಕಮಾಂಡ್ ನಿಂದ ಉತ್ತರ ಸಿಗಲಿದೆ. ಈ ಬಗ್ಗೆ ಸ್ವತಃ ಸಿಎಂ ಹೇಳಿಕೆ ನೀಡಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ‘ಬಾದಾಮಿಯಲ್ಲಿ ಸ್ಪರ್ಧೆ ಮಾಡಲೇಬೇಕೆಂದು ನನಗೇನೂ ಇಲ್ಲ. ಆದರೆ ಕಾರ್ಯಕರ್ತರು, ಅಲ್ಲಿನ ಜನರು ಒತ್ತಾಯ ಮಾಡುತ್ತಿದ್ದಾರೆ’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಹಾಗಿದ್ದರೂ ಅಂತಿಮವಾಗಿ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧರಿರುವುದಾಗಿ ಅವರು ಹೇಳಿಕೊಂಡಿದ್ದಾರೆ. ಬೆಂಗಳೂರಿಗೆ ಬಂದ ಮೇಲೆ ಹೈಕಮಾಂಡ್ ಜತೆ ಮಾತುಕತೆ ನಡೆಸುವುದಾಗಿ ಅವರು ಹೇಳಿಕೊಂಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.