Publish Date: Fri, 12 Jan 2018 (07:46 IST)
Updated Date: Fri, 12 Jan 2018 (07:47 IST)
ಮಂಡ್ಯ: ಸಿಎಂ ಸಿದ್ದರಾಮಯ್ಯ ಇಂದು ಸಕ್ಕರೆ ನಾಡು ಮಂಡ್ಯದಲ್ಲಿ ತಮ್ಮ ಸರ್ಕಾರದ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.
ಮಂಡ್ಯ ಜಿಲ್ಲೆಯ ವಿವಿಧೆಡೆ ಇಂದು ಸಾಧನಾ ಸಮಾವೇಶದಲ್ಲಿ ಸಿಎಂ ಪಾಲ್ಗೊಳ್ಳಲಿದ್ದಾರೆ. ನಿನ್ನೆ ಮೈಸೂರಿನಲ್ಲಿ ವಿವಿಧೆಡೆ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡ ಸಿಎಂ ಇಂದು ಮಂಡ್ಯದತ್ತ ಪಯಣ ಬೆಳೆಸಿದ್ದಾರೆ.
ಮಂಡ್ಯ ಜಿಲ್ಲೆಯ ಮಳವಳ್ಳಿ, ಶ್ರೀರಂಗಪಟ್ಟಣ ಸೇರಿದಂತೆ ಹಲವೆಡೆ ಸಿಎಂ ಇಂದು ಕಾರ್ಯಕ್ರಮವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಸಂಜೆ 4.40 ಕ್ಕೆ ಕೆ.ಆರ್.ಪೇಟೆಯಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಂಜೆ 7 ಗಂಟೆ ಸುಮಾರಿಗೆ ಬೆಂಗಳೂರಿಗೆ ಮರಳಲಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ