Publish Date: Thu, 16 Nov 2017 (10:05 IST)
Updated Date: Thu, 16 Nov 2017 (10:08 IST)
ಬೆಂಗಳೂರು: ಖಾಸಗಿ ವೈದ್ಯರಿಗೆ ಕಡಿವಾಣ ಹಾಕುವಂತಹ ವಿಧೇಯಕ ಮಂಡಿಸಲು ಹೊರಟಿರುವ ಸರ್ಕಾರದ ವಿರುದ್ಧ ಮುಷ್ಕರ ನಿರತರಾಗಿರುವ ಖಾಸಗಿ ವೈದ್ಯರಿಗೆ ಸಿಎಂ ಸಿದ್ದರಾಮಯ್ಯ ಟ್ವಿಟರ್ ಮೂಲಕ ಮುಷ್ಕರ ಕೈ ಬಿಡುವಂತೆ ಮನವಿ ಮಾಡಿದ್ದಾರೆ.
ಖಾಸಗಿ ವೈದ್ಯರ ಮುಷ್ಕರದಿಂದಾಗಿ ರೋಗಿಗಳು ಪರದಾಡುವಂತಾಗಿದೆ. ಸೂಕ್ತ ಚಿಕಿತ್ಸೆ ಸಿಗದೇ ಸಾವನ್ನಪ್ಪಿರುವವರ ಸಂಖ್ಯೆ 25 ಕ್ಕೇರಿದೆ. ಈ ಹಿನ್ನಲೆಯಲ್ಲಿ ರೋಗಿಗಳಿಗೆ ತೊಂದರೆಯಾಗದಂತೆ ಕರ್ತವ್ಯಕ್ಕೆ ಹಾಜರಾಗಿ ಎಂದು ಸಿಎಂ ಟ್ವಿಟರ್ ನಲ್ಲಿ ಮನವಿ ಮಾಡಿದ್ದಾರೆ.
ಅತ್ತ ವೈದ್ಯರ ಮುಷ್ಕರದಿಂದಾಗಿ ರಾಜಧಾನಿ ಬೆಂಗಳೂರು ಸೇರಿದಂತೆ, ರಾಜ್ಯಾದ್ಯಂತ ರಾಜ್ಯದ, ಹೊರ ರಾಜ್ಯದ ರೋಗಿಗಳು ಚಿಕಿತ್ಸೆ ಸಿಗದೇ ಪರದಾಡುವಂತಾಗಿದೆ. ಹೊರರೋಗಿ ವಿಭಾಗದ ಸೇವೆ ಸ್ಥಗಿತಗೊಳಿಸಿರುವುದರಿಂದ ರೋಗಿಗಳಿಗೆ ತೀವ್ರ ಸಮಸ್ಯೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ಸಿಎಂ ವೈದ್ಯರಿಗೆ ಮನವಿ ಮಾಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ