Publish Date: Fri, 27 Apr 2018 (09:03 IST)
Updated Date: Fri, 27 Apr 2018 (09:05 IST)
ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಗೆ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿರುವ ಸಿಎಂ ಸಿದ್ದರಾಮಯ್ಯ ತಮ್ಮ ಎದುರಾಳಿಗಳು ಯಾರೆಂದು ಹೇಳಿಕೊಂಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ‘ಸಿದ್ದರಾಮಯ್ಯ v/s ಬಿಎಸ್ ವೈ + ರೆಡ್ಡಿ ಸಹೋದರರು+ ಕುಮಾರಸ್ವಾಮಿ. ಬಿಎಸ್ ವೈ ಇಲ್ಲಿ ಪ್ರಚಾರ ಮಾಡ್ತಾರೆ ಅಂತ ನನಗನಿಸುತ್ತಿಲ್ಲ. ಹಾಗಾಗಿ ಅವರು ತಮ್ಮ ಕ್ಷೇತ್ರವನ್ನೇ ಉಳಿಸಿಕೊಳ್ಳಲಾಗದ, ತಮ್ಮ ರಾಜ್ಯವನ್ನು ಗೂಂಡಾ ರಾಜ್ಯವಾಗಿ ಮಾಡಿದ ಉತ್ತರ ಪ್ರದೇಶ ಸಿಎಂ ಯೋಗಿ ಅವರನ್ನು ಕರೆಸಿಕೊಳ್ಳುತ್ತಿದ್ದಾರೆ. ಅವರಿಗೆ ಗುಡ್ ಲಕ್’ ಎಂದು ಟ್ವೀಟ್ ಮಾಡಿದ್ದಾರೆ.
ಇದಕ್ಕೂ ಮೊದಲು ಸುದ್ದಿಗಾರರೊಂದಿಗೆ ಮಾತನಾಡುವಾಗ ಸಿಎಂ ಸಿದ್ದರಾಮಯ್ಯ ಯೋಗಿ ವಿರುದ್ಧ ವಾಗ್ದಾಳಿ ನಡೆಸಿದ್ದರು. ಅಲ್ಲಿ ಏನೂ ಮಾಡಲಾಗದವರು ಇಲ್ಲಿ ಪ್ರಚಾರ ಮಾಡಿ ಏನು ಸಾಧಿಸುತ್ತಾರೆ ಎಂದು ಕಿಡಿ ಕಾರಿದ್ದರು.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.