Publish Date: Sun, 29 Apr 2018 (08:55 IST)
Updated Date: Sun, 29 Apr 2018 (08:57 IST)
ಬೆಂಗಳೂರು: ಸಿದ್ದರಾಮಯ್ಯ ಸರ್ಕಾರದಲ್ಲಿ ಮಹಿಳೆ ಮತ್ತು ಮಕ್ಕಳ ಸುರಕ್ಷತೆಗೆ ಬೆಲೆಯೇ ಇಲ್ಲ ಎಂದು ಟೀಕಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪಗೆ ಸಿಎಂ ಸಿದ್ದು ತಿರುಗೇಟು ನೀಡಿದ್ದಾರೆ.
ಸದನದಲ್ಲಿ ಬ್ಲೂ ಫಿಲಂ ನೋಡಿದವರಿಗೆ ಟಿಕೆಟ್ ನೀಡಿದವರು, ಉತ್ತರ ಪ್ರದೇಶದಲ್ಲಿಅತ್ಯಾಚಾರ ಮಾಡಿದ ನಿಮ್ಮ ಪಕ್ಷದ ಶಾಸಕನಿಗೆ ಪೊಲೀಸ್ ರಕ್ಷಣೆ ಸಿಗುತ್ತದೆ, ಆ ಸಂತ್ರಸ್ತೆಯ ತಂದೆ ಪೊಲೀಸ್ ಕಸ್ಟಡಿಯಲ್ಲೇ ಸಾಯುತ್ತಾರೆ. ನಿಮ್ಮ ಪಕ್ಷದ ಶಾಸಕರು ಜಮ್ಮು ಮತ್ತು ಕಾಶ್ಮೀರದಲ್ಲಿ ಮುಗ್ಧ ಬಾಲಕಿಯ ಅತ್ಯಾಚಾರ ಪ್ರಕರಣವನ್ನು ಸಮರ್ಥಿಸಿಕೊಳ್ಳುತ್ತಾರೆ. ಈಗ ಹೇಳಿ ಮಹಿಳಾ ಶಕ್ತಿ ಬಿಜೆಪಿಯೊಂದಿಗಿರಲು ಹೇಗೆ ಸಾಧ್ಯ?ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.
ಅಷ್ಟೇ ಅಲ್ಲ, ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಸಿಎಂ, ನಿಮ್ಮದೇ ಪಕ್ಷದ ನಾಯಕರು ನೈತಿಕ ಪೊಲೀಸ್ ಗಿರಿ ಎಂಬ ಹೆಸರಿನಲ್ಲಿ ಗೂಂಡಾಯಿಸಂ ಮಾಡುತ್ತಿದ್ದಾರೆ. ಮಹಿಳೆಯರ ಡ್ರೆಸ್ ಕೋಡ್ ಬಗ್ಗೆ ಮಾತನಾಡುತ್ತೀರಿ. ನಿಮ್ಮಿಂದ ಮಹಿಳಾ ಸಬಲೀಕರಣ ನಿರೀಕ್ಷಿಸಲು ಹೇಗೆ ಸಾಧ್ಯ? ಎಂದು ಸಿಎಂ ಬಿಜೆಪಿಗೆ ಪ್ರಶ್ನೆ ಮಾಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.