Publish Date: Sun, 29 Apr 2018 (08:59 IST)
Updated Date: Sun, 29 Apr 2018 (09:03 IST)
ಬೆಂಗಳೂರು: ಬೇಡಕಿಪಾಳ್ಯದಲ್ಲಿ ಚುನಾವಣಾ ರ್ಯಾಲಿಯಲ್ಲಿ ಪಾಲ್ಗೊಂಡ ಸಿಎಂ ಸಿದ್ದರಾಮಯ್ಯ ಬಿಜೆಪಿ ಮತ್ತು ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
‘ಮೋದಿ ಮತ್ತು ಅಮಿತ್ ಶಾ ನಮ್ಮ ಸರ್ಕಾರದ ಮೇಲೆ ಆರೋಪ ಮಾಡ್ತಾರೆ. ಆದರೆ ಅವರಿಗೆ ತಮ್ಮ ಪಕ್ಕದಲ್ಲಿ ಜೈಲಿಗೆ ಹೋಗಿ ಬೇಲ್ ಮೇಲೆ ಹೊರಗಿರುವವರನ್ನೇ ಕಾಣಿಸುತ್ತಿಲ್ಲ’ ಎಂದು ಲೇವಡಿ ಮಾಡಿದ್ದಾರೆ.
ಅಷ್ಟೇ ಅಲ್ಲದೆ, ನರೇಂದ್ರ ಮೋದಿ ಪ್ರಧಾನಿ ಹುದ್ದೆಗೇ ಅವಮಾನವಾಗುವ ರೀತಿ ನಡೆದುಕೊಳ್ತಿದ್ದಾರೆ. ಸುಳ್ಳು ಹೇಳುವುದನ್ನು ಆರಂಭಿಸಿದ್ದಾರೆ. ಬಿಜೆಪಿಯವರು ರಾಜ್ಯಾಂದ್ಯಂತ ಸುಳ್ಳು ಪ್ರಚಾರ ನಡೆಸುತ್ತಿದ್ದಾರೆ’ ಎಂದು ಸಿಎಂ ವಾಗ್ದಾಳಿ ನಡೆಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.