Publish Date: Fri, 04 May 2018 (09:31 IST)
Updated Date: Fri, 04 May 2018 (09:35 IST)
ಬೆಂಗಳೂರು: ನಿನ್ನೆ ರಾಜ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ಬಂದ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಬಗ್ಗೆ ಸಿಎಂ ಸಿದ್ದರಾಮಯ್ಯ ಟೀಕೆ ಮಾಡಿದ್ದಾರೆ.
ಉತ್ತರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಸುಂಟರಗಾಳಿಗೆ 64 ಜನ ಮಡಿದಿದ್ದಾರೆ. ಅವರ ಕುಟುಂಬಗಳಿಗೆ ನನ್ನ ಹೃದಯಪೂರ್ವಕ ಸಂತಾಪಗಳು. ಪಾಪ.. ನಿಮ್ಮ ಸಿಎಂ ನಮ್ಮ ಕರ್ನಾಟಕದಲ್ಲಿದ್ದಾರೆ. ಅವರು ಬೇಗ ತಮ್ಮ ತವರಿಗೆ ತೆರಳಿ ಅಗತ್ಯ ಕ್ರಮ ಕೈಗೊಳ್ಳುತ್ತಾರೆ ಎಂದು ನಂಬಿದ್ದೇನೆ’ ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.
ಉತ್ತರ ಪ್ರದೇಶ ಸಿಎಂ ಯೋಗಿ ಕರ್ನಾಟಕದಲ್ಲಿ ಚುನಾವಣಾ ಪ್ರಚಾರ ಮಾಡುವುದರ ಕುರಿತು ಆಗಾಗ ಸಿಎಂ ಸಿದ್ದರಾಮಯ್ಯ ಟಾಂಗ್ ಕೊಡುತ್ತಲೇ ಇರುತ್ತಾರೆ. ಇದೀಗ ಮತ್ತೊಮ್ಮೆ ಅದೇ ಕೆಲಸ ಮಾಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.