ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಗೆ ಸಿದ್ಧವಾಗಲು ಕರ್ನಾಟಕದ ಎಲ್ಲಾ ರಾಜಕೀಯ ಪಕ್ಷಗಳು ಹೈಟೆಕ್ ಮೊರೆ ಹೋಗಿವೆ. ಸಿಎಂ ಸಿದ್ಧರಾಮಯ್ಯ ವಿಶೇಷ ಸ್ಟುಡಿಯೋ ನಿರ್ಮಾಣಕ್ಕೆ ಮುಂದಾಗಿದ್ದಾರೆ.
ಸಿಎಂ ಸಿದ್ಧರಾಮಯ್ಯ ಜನರಿಗೆ ತಮ್ಮ ಸರ್ಕಾರದ ಸಾಧನೆಗಳನ್ನು ಆಧುನಿಕ ತಂತ್ರಜ್ಞಾನಗಳ ಮೂಲಕ ತಲುಪಿಸಲು ಹೈಟೆಕ್ ಸ್ಟುಡಿಯೋ ನಿರ್ಮಾಣ ಮಾಡಲಿದ್ದಾರೆ. ಈ ಮೂಲಕ ಯುವಜನರನ್ನು ಸೆಳೆಯುವ ತಂತ್ರ ಮಾಡಿದ್ದಾರೆ.
ಇಂದು ಹೆಚ್ಚಿನವರು ಸಾಮಾಜಿಕ ಜಾಲತಾಣಗಳನ್ನು ಬಳಸುವ ಕಾರಣಕ್ಕೆ ಜೆಡಿಎಸ್ ಪಕ್ಷ ಕೂಡಾ ಸಾಮಾಜಿಕ ಜಾಲತಾಣದ ಮೂಲಕ ಪ್ರಚಾರ ನಡೆಸಲು ಮುಂದಾಗಿದೆ. ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣಗೆ ಇದರ ಸಂಪೂರ್ಣ ಉಸ್ತುವಾರಿ ನೀಡಲಾಗಿದೆ. ಎಚ್. ಡಿ. ಕುಮಾರ ಸ್ವಾಮಿ ಕೂಡಾ ವಿರೋಧ ಪಕ್ಷಗಳ ಕಡತಗಳನ್ನು ಸಂಗ್ರಹಿಸುತ್ತಿದ್ದಾರೆ. ಈ ಮೂಲಕ ಕಾಲಕ್ಕೆ ತಕ್ಕಂತೆ ಪ್ರಚಾರ ನಡೆಸುವ ಲೆಕ್ಕಾಚಾರ ರಾಜಕೀಯ ಪಕ್ಷಗಳದ್ದು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ